ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ…!

ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ (72) ಅ.09 ರಂದು ತಡರಾತ್ರಿ 2 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ವೃತ್ತಿಯಲ್ಲಿ ಬಸ್ ಚಾಲಕರಾಗಿದ್ದ ಸತ್ಯಜಿತ್ ನೇಕ ಊರುಗಳಿಗೆ ತೆರಳಿ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ಇದೇ ಮುಂದೆ ಅವರ ಬಣ್ಣದ ಬದುಕಿಗೆ ದಾರಿಮಾಡಿಕೊಟ್ಟಿತು. ನಟನೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ಸತ್ಯಜಿತ್ ಪೊಲೀಸ್ ಲಾಕ್ ಅಪ್, ನಮ್ಮೂರ ಹಮ್ಮೀರ ಸೇರಿ 600 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರರಂಗಕ್ಕೆ ಪ್ರವೇಶಿಸಿದ ಬಳಿಕ ಇವರು ತಮ್ಮ ಹೆಸರನ್ನು ಸತ್ಯಜಿತ್ ಎಂದು ಬದಲಾಯಿಸಿಕೊಂಡಿದ್ದರು. ಅವರ ನಿಜವಾದ ಹೆಸರು ಸಯ್ಯದ್ ನಿಜಾಮುದ್ದೀನ್. ಮುಂಬೈ ನಲ್ಲಿ ನಾಟಕ ಪ್ರದರ್ಶನ ನೀಡಿದಾಗ ಸತ್ಯಜಿತ್ ಅವರಿಗೆ ನಾನಾ ಪಾಟೇಕರ್ ಅವರ ಪರಿಚಯವಾಗಿ ಬಾಲಿವುಡ್ ನಲ್ಲೂ ಸತ್ಯಜಿತ್ ನಟಿಸಿದ್ದರು.

ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಸದ್ಯ ಮೃತದೇಹವನ್ನು ಹೆಗಡೆನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು ಮಧ್ಯಾಹ್ನ 3 ಗಂಟೆಗೆ ಹೆಗಡೆ ನಗರದ ಖಬರ್ ಸ್ಥಾನ್ ದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights