ಜಸ್ಟೀಸ್ ರಿತು ರಾಜ್ ಅವಸ್ಥಿ  ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ!

ಅಲಹಾಬಾದ್ ಹೈಕೋರ್ಟ್ ನ ಹಿರಿಯ ನ್ಯಾಯಾಧೀಶ, ಜಸ್ಟೀಸ್ ರಿತು ರಾಜ್ ಅವಸ್ಥಿ  ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಸುಪ್ರೀಂಕೋರ್ಟ್ ಶಿಫಾರಸಿನಂತೆ ಈ ಅಧಿಸೂಚನೆ ಹೊರಡಿಸಲಾಗಿದೆ. 1960ರ ಜುಲೈ 3ರಂದು ಜನಿಸಿದ ಜಸ್ಟೀಸ್ ಅವಸ್ಥಿ ಕಾನೂನು ಪದವಿಯನ್ನು 1986ರಲ್ಲಿ ಲಕ್ನೊ ವಿಶ್ವವಿದ್ಯಾಲಯದಿಂದ ಮುಗಿಸಿದ್ದರು. 1987ರಲ್ಲಿ ಅಡ್ವೊಕೇಟ್ ಆಗಿ ದಾಖಲಾತಿ ಮಾಡಿಕೊಂಡ ನಂತರ ಸಿವಿಲ್, ಸರ್ವಿಸ್ ಮತ್ತು ಶಿಕ್ಷಣ ವಿಷಯಗಳಲ್ಲಿ ಅಲಹಾಬಾದ್ ಹೈಕೋರ್ಟ್ ನ ಲಕ್ನೊ ಪೀಠದ ಮೂಲಕ ವ್ಯಾಜ್ಯಗಳ ಅಭ್ಯಾಸ ನಡೆಸುತ್ತಿದ್ದರು. ಒಟ್ಟು 13 ರಾಜ್ಯಗಳ ಹೈಕೋರ್ಟ್​ಗಳಿಗೆ ಮುಖ್ಯ ನ್ಯಾಯಾಧೀಶರನ್ನು ನೇಮಿಸಲಾಗಿದೆ. ಗುಜರಾತ್ ಸಿಜೆಯಾಗಿ ನ್ಯಾ.ಅರವಿಂದ್ ಕುಮಾರ್ ಅವರನ್ನೂ, ತೆಲಂಗಾಣ ಸಿಜೆಯಾಗಿ ಸತೀಶ್ ಚಂದ್ರ ಶರ್ಮ ಅವರನ್ನು ನೇಮಕಗೊಳಿಸಲಾಗಿದೆ.

ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಾಜೇಶ್ ಬಿಂದಾಲ್ ಅವರನ್ನು ಅಲಹಾಬಾದ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಮೇಘಾಲಯ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಂಜಿತ್ ವಿ. ಮೊರೆ ಅವರನ್ನು, ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಕರ್ನಾಟಕದ ನ್ಯಾಯಮೂರ್ತಿಯಾಗಿದ್ದ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಮಧ್ಯಪ್ರದೇಶ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರನ್ನು ಕೊಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

ಹಿಮಾಚಲ ಪ್ರದೇಶ ನ್ಯಾಯಮೂರ್ತಿ ಆರ್.ವಿ. ಮಲಿಮಠ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಅಲಹಾಬಾದ್ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಛತ್ತೀಸ್​ಗಢದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights