ಲಖಿಂಪುರ್ ಖೇರಿ ರೈತರ ಹತ್ಯೆ ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್ ಗೆ ಕರೆ..!

ಕಳೆದ ವಾರ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಹತ್ಯೆಯನ್ನು ವಿರೋಧಿಸಿ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಎಂವಿಎ ಮೈತ್ರಿಕೂಟ ಸೋಮವಾರ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಪತ್ರಕರ್ತ ಸೇರಿದಂತೆ ನಾಲ್ವರು ರೈತರು ಲಖಿಂಪುರ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದಾರೆ.

ಮಧ್ಯರಾತ್ರಿಯಿಂದ ಆರಂಭವಾಗುವ ಬಂದ್‌ಗೆ ರಾಜ್ಯದ ಮೂರು ಆಡಳಿತ ಮಿತ್ರ ಪಕ್ಷಗಳಾದ ಶಿವಸೇನೆ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಕರೆ ನೀಡಿದ್ದು, ಜನರು ಬಂದ್‌ಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸೋಮವಾರ ರಾಜ್ಯದಲ್ಲಿ ಎಲ್ಲವನ್ನೂ ಮುಚ್ಚಲಾಗುವುದು ಎಂದು ಮಹಾರಾಷ್ಟ್ರ ವಿಕಾಸ್ ಅಘಡಿ (ಎಂವಿಎ) ಸರ್ಕಾರ ತಿಳಿಸಿದೆ. ಸಮ್ಮಿಶ್ರ ಸರ್ಕಾರದ ಪಕ್ಷದ ಸದಸ್ಯರು ನಾಗರಿಕರು ಮತ್ತು ರೈತರು ತಮಗೆ ಬೆಂಬಲವನ್ನು ವ್ಯಕ್ತಪಡಿಸುವಂತೆ ಎಂದು ಎನ್‌ಸಿಪಿ ಸಚಿವ ನವಾಬ್ ಮಲಿಕ್ ಭಾನುವಾರ ಹೇಳಿದರು.

ಲಖಿಂಪುರ ಹಿಂಸಾಚಾರವನ್ನು ಖಂಡಿಸಿದ ಎನ್‌ಸಿಪಿ ಟ್ವೀಟ್‌ಗಳಲ್ಲಿ ಕೇಂದ್ರ ಸರ್ಕಾರವನ್ನು ದಮನಕಾರಿ ಸರ್ಕಾರ ಎಂದು ಕರೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಕೇಂದ್ರ ಸಚಿವರ ಮಗ ಆಶೀಶ್‌ರನ್ನು ಬಂಧಿಸಲಾಗಿದೆ. ಜೊತೆಗೆ ಕೇಂದ್ರ ಸಚಿವ ಅಜಯ್ ಮಿಶ್ರಾ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಂದ್ ಗೆ ಕರೆ ನೀಡಿದೆ.

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಕೂಡ ತಮ್ಮ ಪಕ್ಷವು ಮುಂಬೈನ ರಾಜಭವನದ ಹೊರಗೆ “ಮೌನ ವ್ರತ” ವನ್ನು ಆಚರಿಸುವುದಾಗಿ ಹೇಳಿದರು.

ಹಲವಾರು ಸಂಘಟನೆಗಳು ಬಂದ್‌ಗೆ ಬೆಂಬಲವನ್ನು ನೀಡಿವೆ. ರಿಟೇಲ್ ಟ್ರೇಡರ್ಸ್ ವೆಲ್‌ಫೇರ್ ಅಸೋಸಿಯೇಶನ್ (ಎಫ್‌ಆರ್‌ಟಿಡಬ್ಲ್ಯೂಎ) ಪತ್ರಿಕಾ ಹೇಳಿಕೆಯಲ್ಲಿ, ಆಡಳಿತ ಒಕ್ಕೂಟ ಕರೆ ನೀಡಿರುವ ಬಂದ್‌ಗೆ ಬೆಂಬಲವಾಗಿ ಸಂಜೆ 4 ಗಂಟೆಯವರೆಗೆ ಅಂಗಡಿಗಳನ್ನು ಮುಚ್ಚಲು ನಿರ್ಧರಿಸಿದೆ ಎಂದು ಹೇಳಿದೆ.

ಬಂದ್‌ಗಾಗಿ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಜೊತೆಗೆ ಪೊಲೀಸ್ ಗಸ್ತು ತೀವ್ರಗೊಳಿಸಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights