ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಬಂಧನ

15 ವರ್ಷದ ಬಾಲಕಿಯ ಮೇಲೆ ಕಾಮುಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿದ್ದಾರೆ.

ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ ಗರ್ಭಿಣಿಯಾಗಿದ್ದು, ಮಗುವಿನ ಜನ್ಮ ನೀಡಿದ್ದಾಳೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ 20 ವರ್ಷದ ಯುವಕನನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ ಎಂದು ಜವಾಹರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: IPL 2021: ಹುಸಿಯಾಯ್ತು ಕಪ್ ಗೆಲ್ಲುವ ಭರವಸೆ; ಟೂರ್ನಿಯಿಂದ ಆರ್‌ಸಿಬಿ ಔಟ್!

ಜಿಲ್ಲೆಯ ಜವಹಾರ್ ತಾಲೂಕಿನ ಗ್ರಾಮವೊಂದರ ನಿವಾಸಿಯಾದ ಆರೋಪಿಯು, ಅದೇ ಗ್ರಾಮದ ಬಾಲಕಿಯ ಮೇಲೆ ಸುಮಾರು ಒಂದು ವರ್ಷದಿಂದ ಪದೇ ಪದೇ ಅತ್ಯಾಚಾರ ಎಸಗಿದ್ದನು.

ಇದರಿಂದ ಬಾಲಕಿ ಗರ್ಭಿಣಿಯಾಗಿದ್ದು, ಕೆಳೆದ ಒಂದೆರೆಡು ದಿನಗಳ ಹಿಂದೆ ಅಕಾಲಿಕವಾಗಿ ಮಗುವಿಗೆ ಜನ್ಮ ನೀಡಿದ್ದರು ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಬಾಲಕಿ ಶನಿವಾರ ಸಲ್ಲಿಸಿದ ದೂರಿನ ಆಧಾರದ ಮೇಲೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವಕನ ವಿರುದ್ದ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Spread the love

Leave a Reply

Your email address will not be published. Required fields are marked *