ಬಿಜೆಪಿ ಶೀಘ್ರವೇ ‘ಸಾವರ್ಕರ್‌ರನ್ನು ರಾಷ್ಟ್ರಪಿತ’ ಎಂದು ಘೋಷಿಸುತ್ತದೆ: ಓವೈಸಿ

ಬ್ರಿಟಿಷರಿಗೆ ಕ್ಷಮಾದಾನ ಪತ್ರ ಬರೆಯುವಂತೆ ಸಾವರ್ಕರ್‌ಗೆ ಮಹಾತ್ಮ ಗಾಂಧಿ ಅವರು ಹೇಳಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಹೇಳಿದ್ದಾರೆ. ಅವರ ಹೇಳಿಕೆಗೆ ತಿರುಗೇಟು ನೀಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್‌ ಓವೈಸಿ, “ಸಾವರ್ಕರ್‌ ಅನ್ನು ರಾಷ್ಟ್ರಪಿತ ಎಂದು ಬಿಜೆಪಿ ಶೀಘ್ರದಲ್ಲೇ ಘೋಷಣೆ ಮಾಡುತ್ತದೆ” ಎಂದು ಹೇಳಿದ್ದಾರೆ.

“ಬಿಜೆಪಿಯು ತನ್ನದೇ ಆದ, ವಿಕೃತವಾದ ಇತಿಹಾಸವನ್ನು ಪ್ರಸ್ತುತ ಪಡಿಸುತ್ತಿದೆ. ಹೀಗೆಯೇ ಮುಂದುವರಿದರೆ ಇನ್ನು ಬಿಜೆಪಿಯವರು ಶೀಘ್ರದಲ್ಲೇ, ರಾಷ್ಟ್ರಪಿತ ಮಹಾತ್ಮ ಗಾಂಧಿಯ ಬದಲಾಗಿ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ಆರೋಪವನ್ನು ಹೊತ್ತಿರುವ ಸಾವರ್ಕರ್‌ ಅನ್ನು ದೇಶದ ಪಿತಾಮಹ ಎಂದು ಹೇಳುತ್ತಾರೆ” ಎಂದು ಓವೈಸಿ ಕಿಡಿಕಾರಿದ್ದಾರೆ.

“ಹಿಂದುತ್ವದ ಐಕಾನ್‌ ಆದ ವೀರ ಸಾರ್ವಕರ್‌ ಅಂಡಮಾನ್‌ ಜೈಲಿನಲ್ಲಿ ಇದ್ದಾಗ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಸಾವರ್ಕರ್‌ಗೆ ಹೇಳಿದ್ದು ಮಹಾತ್ಮ ಗಾಂಧಿಜಿ,” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಂಗಳವಾರ ಹೇಳಿಕೊಂಡಿದ್ದರು.

ಇದನ್ನೂ ಓದಿ: ಡಿಕೆಶಿ ಕಲೆಕ್ಷನ್ ಗಿರಾಕಿ ಎಂದ ಕಾಂಗ್ರೆಸ್‌ ಮಾಧ್ಯಮ ಸಂಯೋಜಕ ಸಲೀಂ ಅಮಾನತು!

“ಸಾವರ್ಕರ್‌ ವಿರು‌ದ್ಧವಾಗಿ ಹಲವಾರು ಸುಳ್ಳು ಸುದ್ದಿಗಳನ್ನು ಹರಡಲಾಗಿದೆ. ಬ್ರಿಟಿಷ್‌ ಸರ್ಕಾರದ ಮುಂದೆ ಸಾವರ್ಕರ್‌ ಎರಡು ಬಾರಿ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದರು ಎಂದು ಪದೇ ಪದೇ ಹೇಳಲಾಗುತ್ತದೆ. ಆದರೆ ನಿಜವಾಗಿ ಸಾವರ್ಕರ್‌ ತನ್ನ ಬಿಡುಗಡೆಗಾಗಿ ಈ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಜೈಲಿನಲ್ಲಿರುವ ಕೈದಿಗಳು ಕ್ಷಮಾದಾನ ಅರ್ಜಿಯನ್ನು ಸಲ್ಲಿಕೆ ಮಾಡಬಹುದು,” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಹೇಳಿದ್ದರು.

“ಮಹಾತ್ಮ ಗಾಂಧಿಜಿ ಅವರು ಸಾವರ್ಕರ್‌ ಬಳಿಕ ಕ್ಷಮಾದಾನ ಅರ್ಜಿ ಸಲ್ಲಿಸಲು ಹೇಳಿದರು. ಸಾವರ್ಕರ್‌ ಜೀ ಅನ್ನು ಬಂಧನದಿಂದ ಮುಕ್ತಗೊಳಿಸಬೇಕು ಎಂದು ಮಹಾತ್ಮ ಗಾಂಧಿ ಮನವಿ ಮಾಡಿದ್ದರು. ಗುಲಾಮಗಿರಿಯ ಸಂಕೋಲೆಯನ್ನು ಮುರಿಯಲು ಜನರಿಗೆ ಸಾವರ್ಕರ್‌ ಪ್ರೇರಣೆ ನೀಡಿದರು. ಸಾವರ್ಕರ್‌ ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳ ನಡುವೆ ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು. ಆದರೆ ಸಾವರ್ಕರ್‌ ಅವರು ದೇಶದ ಸಾಂಸ್ಕೃತಿಕ ಏಕತೆಗಾಗಿ ನೀಡಿದ ಕೊಡುಗೆಯನ್ನು ಕಡೆಗಣಿಸಲಾಗುತ್ತಿದೆ” ಎಂದು ಕೂಡಾ ಅವರು ಹೇಳಿದ್ದರು.

ಇದನ್ನೂ ಓದಿ: ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಬಗ್ಗೆ ಮೋದಿ ಬೆಂಬಲಿಗಳಿಂದ ಅವಹೇಳನ; ಸಾಹಿತ್ಯ ಪ್ರೇಮಿಗಳ ಆಕ್ರೋಶ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights