ಡಿಕೆಶಿ ಕಲೆಕ್ಷನ್ ಗಿರಾಕಿ ಎಂದ ಕಾಂಗ್ರೆಸ್‌ ಮಾಧ್ಯಮ ಸಂಯೋಜಕ ಸಲೀಂ ಅಮಾನತು!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಪತ್ರಿಕಾಗೋಷ್ಟಿಯ ಸಂದರ್ಭದಲ್ಲಿ ಭ್ರಷ್ಟಾಚಾರದ ಆರೋಪ ಮಾಡಿದ್ದ ರಾಜ್ಯ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಕೆಪಿಸಿಸಿ ವೇದಿಕೆಯಲ್ಲಿಯೇ ಡಿ.ಕೆ. ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದು ಹೇಳಿದ್ದರು.

ಡಿಕೆ ಶಿವಕುಮಾರ್ ಅವರ ವಿರುದ್ಧ ಸಲೀಂ ಅವರು ಆಧಾರರಹಿತ ಆರೋಪ ಮಾಡಿದ್ದಾರೆ. ಅವರು ಹೇಳಿರುವುದರಲ್ಲಿ ಸತ್ಯಾಂಶವಿಲ್ಲ. ವೇದಿಕೆಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಡಿರುವ ಮಾತುಗಳು ಅಲ್ಲ, ಆಫ್ ದಿ ರೆಕಾರ್ಡ್ ಅವರಿಬ್ಬರೂ ವೈಯಕ್ತಿಕವಾಗಿ ಮಾತನಾಡಿಕೊಂಡಿದ್ದಾರಷ್ಟೆ, ಆದರೂ ಅವರ ಮಾತುಗಳನ್ನು ಪಕ್ಷದ ಶಿಸ್ತು ಸಮಿತಿಗೆ ಕಳುಹಿಸಲಾಗಿದ್ದು ಪರಾಮರ್ಶೆ ನಡೆಸಿ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನ ಮಾಡಲಾಗಿದೆ. ಉಗ್ರಪ್ಪನವರಲ್ಲಿ ವಿವರಣೆ ಕೇಳುತ್ತೇವೆ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಉಗ್ರಪ್ಪ ಹಾಗೂ ಸಲೀಂ ಅವರು ತಮ್ಮ ಅಧ್ಯಕ್ಷರ ಮೇಲೆ ಭ್ರಷ್ಟಾಚಾರ ಹಾಗೂ ವಿಫಲ ನಾಯಕತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಪಸಂಖ್ಯಾತರಾದ ಸಲೀಂ ಅವರನ್ನು ಅಮಾನತು ಮಾಡಿದೆ. ಆದರೆ ಉಗ್ರಪ್ಪ ಅವರಿಗೆ ರಾಜಮರ್ಯಾದೆ ನೀಡಿದೆ. ಸಿಎಂ ಇಬ್ರಾಹಿಂ ಹೇಳಿದ ಮಾತುಗಳನ್ನು ಕಾಂಗ್ರೆಸ್‌ ನಿಜಮಾಡಿದೆ ಎಂದು ಬಿಜೆಪಿ ಟೀಕಿಸಿದೆ. 

ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್‌, ಅನಧಿಕೃತ ಮಾತುಗಳನ್ನು ಇಟ್ಟುಕೊಂಡು ರೊಟ್ಟಿ ನೆಕ್ಕುತ್ತಿರುವ ಬಿಜೆಪಿಯವರೇ ನಿಮ್ಮ ಪಕ್ಷದವರಾದ ಹೆಚ್ ವಿಶ್ವನಾಥ್ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ ಬಿ ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಆರೋಪಗಳಿಗೆ ಮೊದಲು ಉತ್ತರಿಸಿ ಎಂದು ಹೇಳಿದೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್‌ ಸೋಷಿಯಲ್ ಮೀಡಿಯಾ ನಿರ್ವಹಿಸುತ್ತಿದ್ದ ಕಂಪನಿ ಮೇಲೆ IT ದಾಳಿ; ಹಿಂದಿನ ಹುನ್ನಾರವೇನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights