ಬಂಟ್ವಾಳ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಆರೋಪಿಗಳ ಬಂಧನ

16 ವರ್ಷದ ಬಾಲಕಿಯನ್ನು ಕಾಮುಕರ ಗುಂಪು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಂಟ್ವಾಳದ ಬಳಿ ನಡೆದಿದೆ.

ಘಟನೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಆರೋಪಿಗಳಲ್ಲಿ ಒಬ್ಬನಾದ ಶರತ್ ಶೆಟ್ಟಿ ಎಂಬಾತ ಬಾಲಕಿಗೆ ಪರಿಚಿತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ಎಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಬಂಟ್ವಾಳ ಪೊಲೀಸರ ತಂಡದೊಂದಿಗೆ ವಿಚಾರಣೆ ನಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆಗೆ ಎಸ್‌ಪಿ ಋಷಿಕೇಶ್ ಸೋನಾವಣೆ ಅವರು ಭೇಟಿ ನೀಡಿದ್ದಾರೆ.

ಬಾಲಕಿ ನೀಡಿದ ದೂರಿನ ಆಧಾರದಲ್ಲಿ ಎಫ್.ಐ.ಆರ್. ದಾಖಲು ಮಾಡಲಾಗಿದೆ. ಪ್ರಕರಣದಲ್ಲಿ ಐವರು ಆರೋಪಿಗಳು ಇರುವುದಾಗಿ ಕಂಡುಬಂದಿದೆ ಎಂದು ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

ಬಾಲಕಿಯನ್ನು ವಿಚಾರಣೆ ನಡೆಸಿದಾಗ, ಅ.8ರಂದು ಬೆಳಗ್ಗೆ ಮನೆಯಿಂದ ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ಬಿಳಿ ಕಾರಿನಲ್ಲಿ ಬಂದ ಪರಿಚಿತ ಆರೋಪಿ ಇನ್ನಿತರರೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ತಿಳಿದು ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಂತ್ರಸ್ತ ಬಾಲಕಿ ಮಂಗಳೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬಾಲಕಿಯ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ವಾಜಪೇಯಿ ಭಾಷಣದ ವಿಡಿಯೋ ಹಂಚಿಕೊಂಡು ಬಿಜೆಪಿಗೆ ತಿರುಗೇಟು ನೀಡಿದ ವರುಣ್‌ ಗಾಂಧಿ

Spread the love

Leave a Reply

Your email address will not be published. Required fields are marked *