ರಾಜಸ್ಥಾನ: ಹೋಂವರ್ಕ್‌ ಮಾಡದ ಕಾರಣಕ್ಕೆ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ

ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿ ಕೊಲೆ ಮಾಡಿರುವ ಅಘಾತಕಾರಿ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಈ ದುರಂತ ಘಟನೆ ನಡೆದಿದ್ದು, ಹೋಂವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ್ದಾರೆ. ಪೊಲೀಸರು ಆರೋಪಿ ಶಿಕ್ಷಕ ಮನೋಜ್ (35)ರನ್ನು ಬಂಧಿಸಿದ್ದಾರೆ. ಮೃತ ವಿದ್ಯಾರ್ಥಿಯನ್ನು 13 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ.

ರಾಜಸ್ಥಾನದ ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋತಾಸ್ರಾ ಘಟನೆಯನ್ನು ಖಂಡಿಸಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ಖಾಸಗಿ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಪಂಜಾಬ್: ಮಾಜಿ‌ ಸಿಎಂ ಹೊಸ ಪಕ್ಷ ಸ್ಥಾಪನೆ; ಬಿಜೆಪಿ ಜೊತೆ ಮೈತ್ರಿಗೆ ಸಿದ್ಧ!

“13 ವರ್ಷದ ಗಣೇಶ್ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಹೋಂವರ್ಕ್ ಪೂರ್ಣಗೊಳಿಸದ ಕಾರಣ ಶಿಕ್ಷಕರು ತೀವ್ರವಾಗಿ ಥಳಿಸಿದ್ದಾರೆ. ಥಳಿಸಿದ ನಂತರ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ವೈದ್ಯರು ಬಾಲಕ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ” ಎಂದು ಸಾಲಸಾರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ವಿಷ್ಣೋಯ್ ಹೇಳಿದ್ದಾರೆ.

ಬಾಲಕನ ತಂದೆ ಶಿಕ್ಷಕನ ವಿರುದ್ಧ ದುರು ದಾಖಲಿಸಿದ್ದಾರೆ. ಈ ಪ್ರಕರಣ ಕೂಲಂಕಷವಾಗಿ ತನಿಖೆ ಮಾಡುವವರೆಗೂ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಗರ್ಭಿಣಿ ಆನೆ ಹತ್ಯೆ ಪ್ರಕರಣ: ಒಂದೂವರ್ಷದ ಬಳಿಕ ಪೊಲೀಸರಿಗೆ ಶರಣಾದ ಆರೋಪಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights