ಚಿಕಿತ್ಸೆಗಾಗಿ ಜನರ ಪರದಾಟ: ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕಾಗಿ ಶುಕ್ರವಾರ ಶೃಂಗೇರಿ ಬಂದ್!
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕಾಗಿ ಆಗ್ರಹಿಸಿ ಶುಕ್ರವಾರ (ಇಂದು) ಸ್ವಯಂಪ್ರೇರಿತ ಶೃಂಗೇರಿ ಬಂದ್ ನಡೆಸುತ್ತಿದ್ದಾರೆ.
100 ಬೆಡ್ಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಆಗ್ರಹಿಸಿವೆ. ಸ್ಥಳೀಯ ಆಡಳಿತ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದಲೇ ಶುಕ್ರವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಸ್ವಯಂಪ್ರೇರಿತ ಶೃಂಗೇರಿ ಬಂದ್ ನಡೆಸುತ್ತಿದ್ದೇವೆ. ಪ್ರವಾಸಿಗರು ಹಾಗೂ ಭಕ್ತರು ಶೃಂಗೇರಿಗೆ ಬಾರದಂತೆ ಮನವಿ ಮಾಡಲಾಗಿದೆ ಎಂದು ಸ್ಥಳೀಯ ಸಂಘಟನೆಗಳು ತಿಳಿಸಿವೆ.
‘ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ’ ಈ ಬಂದ್ಗೆ ಕರೆ ನೀಡಿದೆ. ಕಳೆದ 14 ವರ್ಷಗಳಿಂದ ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗಾಗಿ ಜನರು ಆಗ್ರಹಿಸುತ್ತಲೇ ಇದ್ದಾರೆ. ಸೂಕ್ತ ಚಿಕಿತ್ಸೆ ಸಿಗದೆ ಜನರು ಪರದಾಡುತ್ತಿದ್ದಾರೆ. ಏನೇ ಗಂಭೀರ ಅನಾರೋಗ್ಯ ಉಂಟಾದರೆ ಮಂಗಳೂರು ಇಲ್ಲವೇ ಮಣಿಪಾಲಕ್ಕೆ ಹೋಗಬೇಕು. ಹೀಗಾಗಿ ಜನರು ಆರೋಗ್ಯ ಕಾಪಾಡಿಕೊಳ್ಳುವುದು ಕಷ್ಟವಾಗಿದೆ. ಅದಕ್ಕಾಗಿ, ಶೃಂಗೇರಿ ಪಟ್ಟಣದಲ್ಲಿ ಆಸ್ಪತ್ರೆ ನಿರ್ಮಿಸುವಂತೆ ಸರ್ಕಾರದ ಗಮನ ಸೆಳೆಯಲು ಬಂದ್ ಮಾಡಲಾಗುತ್ತಿದೆ.
ಸ್ವಯಂಪ್ರೇರಿತ ಶೃಂಗೇರಿ ಬಂದ್ಗೆ ವ್ಯಾಪಕ ಬೆಂಬಲ ದೊರೆತಿದ್ದು, ಶೃಂಗೇರಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ.
ಇದನ್ನೂ ಓದಿ: ವಿಧಾನಸೌಧದಿಂದ ತಳಹಂತದವರೆಗೂ ಬೆಟ್ಟಿಂಗ್, ಮಟ್ಕಾ ಕಬಂಧಬಾಹುಗಳು ಚಾಚಿವೆ: ಹೆಚ್ಡಿಕೆ ಆರೋಪ

