ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ: ಸಿಎಂ ಘೋಷಣೆ

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011 ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಪ್ರಾರಂಭಿಸಲಾಯಿತು. ಕಿತ್ತೂರು ಚನ್ನಮ್ಮ ಪ್ರತಿಮೆಯನ್ನು ಬೆಳಗಾವಿಯ ನಗರದ ಕೇಂದ್ರ ಭಾಗದಲ್ಲಿ ಸ್ಥಾಪಿಸುವಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪಾತ್ರವನ್ನು ಬಹುಮುಖ್ಯವಾದುದು ಎಂದು ಅವರು ಹೇಳಿದ್ದಾರೆ.

ಕಿತ್ತೂರು ರಾಣಿ ಚೆನ್ನಮ್ಮ ನಾಡು ಕಂಡ ದಿಟ್ಟ ಧೀಮಂತ, ಶ್ರೇಷ್ಠ ಸ್ವತಂತ್ರ ಹೋರಾಟಗಾರರಲ್ಲಿ ಒಬ್ಬರು. ಚನ್ನಮ್ಮ ಬ್ರಿಟಿಷರ ವಿರುದ್ಧ ರಣಕಹಳೆ ಊದಿದ ಕರ್ನಾಟಕದ ಹೆಮ್ಮೆಯ ಮಹಿಳೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಕಿತ್ತೂರು ರಾಣಿ ಚೆನ್ನಮ್ಮ ಬೆಳಗಾವಿಗೆ ಮಾತ್ರ ಸೀಮಿತವಾಗಿರದೆ ಇಡೀ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ಅವರ ಜ್ಯೋತಿಯನ್ನು ಬೆಂಗಳೂರಿನವರೆಗೆ ಕೊಂಡೊಯ್ಯಲಾಗಿದೆ. ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ನವರ ಕೊಡುಗೆಯನ್ನು ಸ್ಮರಿಸಿ , ಅವರ ಆಶೋತ್ತರಗಳನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.

ಸಚಿವರಾದ ಮುರುಗೇಶ್ ನಿರಾಣಿ, ಶಂಕರ ಪಾಟೀಲ ಮುನೇನಕೊಪ್ಪ ಶಾಸಕ ರಾಜೂಗೌಡ ಮತ್ತು ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: 21% ಮಾತ್ರ ಸಂಪೂರ್ಣ ಕೋವಿಡ್ ಲಸಿಕೆ ಹಾಕಲಾಗಿದೆ; ಬಿಜೆಪಿ ಸಂಭ್ರಮ ಹಾಸ್ಯಾಸ್ಪದ!: ಸಿದ್ದರಾಮಯ್ಯ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights