ಬೈ ಎಲೆಕ್ಷನ್: 25 ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಗೆಲ್ಲುತ್ತದೆ: ಆರ್ ಅಶೋಕ್

ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅಕ್ಟೋಬರ್ 30 ರಂದು ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣೆಗೆ ಭಾರೀ ಪ್ರಚಾರ ಮಾಡುತ್ತಿದ್ದು, ತೀವ್ರ ಪೈಪೋಟಿ ಇದೆ. ಇಂದು ಸಚಿವ ಆರ್‌ ಅಶೋಕ್‌ ಅವರು ಹಾನಗಲ್‌ನಲ್ಲಿ ಪ್ರಚಾರಕ್ಕೆ ತೆರಳಿದ್ದು, ‘ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು 25 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ದಿನ ದಿನಕ್ಕೂ ಕಾಂಗ್ರೆಸ್ ಪಕ್ಷದ ಪ್ರಭಾವ ಕಡಿಮೆಯಾಗುತ್ತಿದೆ. ಕಳೆದ ಅಸಂಬ್ಲಿ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎದುರೇಟು ನೀಡಿದ್ದೇವೆ. ಈ ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ಸೋಲಲಿದೆ” ಎಂದು ಹೇಳಿದ್ದಾರೆ.

“ಸಿದ್ದರಾಮಯ್ಯ ಅವರು ಅವರ ಆಡಳಿತದಲ್ಲಿ ಶಾದಿ ಭಾಗ್ಯವನ್ನು ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ನೀಡಿದ್ದಾರೆ. ಆ ಭಾಗ್ಯವನ್ನು ಅವರು ದಲಿತರಿಗೆ, ಹಿಂದುಳಿದವರಿಗೆ ಏಕೆ ನೀಡಲಿಲ್ಲ? ಧರ್ಮಗಳನ್ನು, ಜಾತಿಗಳನ್ನು ಹೊಡೆಯುವುದರಲ್ಲಿ ಅವರದ್ದು ಎತ್ತಿದ ಕೈ. ಹೀಗಾಗಿಯೇ, 125 ಸ್ಥಾನದಲ್ಲಿದ್ದ ಕಾಂಗ್ರೆಸ್‌ 75 ಸ್ಥಾನಕ್ಕೆ ಬಂದು ನಿಂತಿದೆ. ಇದರಿಂದ ಸಿದ್ದರಾಮಯ್ಯನವರ ವರ್ಚಸ್ಸು ಕುಂದಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ 746 ರೈತರು ಆತ್ಮಹತ್ಯೆ; ದೇಶದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights