“ನಾನು ಹಿಂದೂವಾಗಿ ನಾಚಿಕೆಪಡುತ್ತೇನೆ”: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್ ಖಂಡನೆ!
ನಿರ್ಭೀತ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಗುರುಗ್ರಾಮದಲ್ಲಿ ನಡೆದ ಮುಸ್ಲಿಮರ ಮೇಲಿನ ದಾಳಿಯನ್ನು ಖಂಡಿಸಿದ್ದು, “ನಾನು ಹಿಂದೂವಾಗಿ ನಾಚಿಕೆಪಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿಯ ಗುರುಗ್ರಾಮದಲ್ಲಿ ಗುರುಗ್ರಾಮದ ಸೆಕ್ಟರ್ 12 ಮತ್ತು ಸೆಕ್ಟರ್ 47 ರಲ್ಲಿ ಕೆಲವು ಹಿಂದೂ ಸಂಘಟನೆಗಳು ಶಾಂತಿಯುತವಾಗಿ ಪ್ರಾರ್ಥನೆ ಮಾಡುತ್ತಿದ್ದ ಮುಸ್ಲಿಮರ ಮೇಲೆ ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ದಾಳಿನಡೆಸಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಅಗಿವೆ.
ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸ್ವರಾ ಭಾಸ್ಕರ್, “ಅನ್ಯ ಧರ್ಮದ ಜನರಿಗೆ ಕಿರುಕುಳ ನೀಡುತ್ತಿರುವ ಕೆಲವು ಪುಂಡ ಪೋಕರಿಗಳು ನನ್ನ ದೇವರ ಹೆಸರನ್ನು ಬಳಸುತ್ತಿದ್ದಾರೆ. ಇದು ನನ್ನ ಹಿಂದೂ ಧರ್ಮಕ್ಕೆ ಮಾಡಿದ ಅವಮಾನವಾಗಿದೆ. ಅಂತಹ ಜನರ ಬಗ್ಗೆ ನನಗೆ ನಾಚಿಕೆಯಾಗುತ್ತದೆ. ನಾನು ಹಿಂದೂವಾಗಿ ನಾಚಿಕೆಪಡುತ್ತೇನೆ. ಹಿಂದೂ ಧರ್ಮವು ಇತರ ಧರ್ಮದ ಜನರಿಗೆ ಕಿರುಕುಳ” ನೀಡುವುದನ್ನು ಕಲಿಸುವುದಿಲ್ಲ” ಎಂದಿದ್ದಾರೆ.
As a Hindu I’m ashamed! https://t.co/26OfIqTeHO
— Swara Bhasker (@ReallySwara) October 22, 2021
“ಧಾರ್ಮಿಕ ಅಸಹಿಷ್ಣುತೆ ಎಲ್ಲಾ ಸಮಯಕ್ಕಿಂತ ಈಗ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಇತರ ಧರ್ಮಗಳನ್ನು ಅರ್ಥಮಾಡಿಕೊಳ್ಳಲು ಮತ್ತು ನಾವು ಜಾತ್ಯತೀತರು ಎಂದು ಸಾಬೀತುಪಡಿಸುವುದು ಮುಖ್ಯವಾಗಿದೆ” ಎಂದು ಟ್ವಿಟರ್ ಬಳಕೆದಾರೊಬ್ಬರು ಹೇಳಿದ್ದಾರೆ.
ದೆಹಲಿ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಆರ್‌ಪಿಸಿ ಸೆಕ್ಷನ್ 354 ಡಿ, 509 (ಮಾತು, ಹಾವಭಾವ ಅಥವಾ ಯಾವುದೇ ಮಹಿಳೆಯನ್ನು ಅವಮಾನಿಸುವ ಉದ್ದೇಶ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 (ಇಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯಗಳನ್ನು ಪ್ರಕಟಿಸಲು ಅಥವಾ ರವಾನಿಸಲು ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: 100 ಕೋಟಿ ಡೋಸ್ ವ್ಯಾಕ್ಸಿನೇಷನ್ ಎಂಬುದು ಸುಳ್ಳು; ಪುರಾವೆ ನೀಡುತ್ತೇನೆ: ಸಂಸದ ಸಂಜಯ್ ರಾವತ್

