ಕುಮಾರಸ್ವಾಮಿ ಬ್ರದರ್, ಬ್ರದರ್ ಅಂತಾನೇ ಕತ್ತು ಕೊಯ್ಯುತ್ತಾರೆ: ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪ

ಹೆಚ್‌ಡಿ ಕುಮಾರಸ್ವಾಮಿ ಅವರು ಬ್ರದರ್, ಬ್ರದರ್ ಅಂತಾನೇ ಕತ್ತು ಕೊಯ್ಯುತ್ತಾರೆ. ಅವರು ಯಾರನ್ನೂ ಬೆಳೆಯಲು ಬಿಡುವುದಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಸಿಂದಗಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕೆ ತೆರಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಬ್ರದರ್‌ ಬ್ರದರ್ ಎಂದು ಹೇಳುತ್ತಲೇ ಕತ್ತು ಕುಯ್ಯುತ್ತಾರೆ. ಅವರು ಲಾಭವಿಲ್ಲದೆ ಯಾವತ್ತೂ ಯಾರಿಗೂ ಕೆಲಸ ಮಾಡಿಕೊಡುವುದಿಲ್ಲ. ಅವರು ಹಣಕ್ಕಾಗಿ ಅಲ್ಪಸಂಖ್ಯಾತರನ್ನು ಬಲಿ ಕೊಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ 10 ಕೋಟಿ ಹಣ ಪಡೆದು ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಉಪಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವು ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್‌ ಮಾಡಿಕೊಂಡಿದೆ. ಹಣಕ್ಕಾಗಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಸುತ್ತಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೈ ಎಲೆಕ್ಷನ್: 25 ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಗೆಲ್ಲುತ್ತದೆ: ಆರ್ ಅಶೋಕ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.