20 ತಿಂಗಳ ನಂತರ ಒಂದನೇ ತರಗತಿಯಿಂದ ಶಾಲೆಗಳು ಆರಂಭ; ಗೈಡ್‌ಲೈನ್ಸ್ ಹೀಗಿವೆ!

ಸೋಮವಾರ (ಅ.25)ದಿಂದ ಒಂದನೇ ತರಗತಿಯಿಂದ ಐದನೇ ತರಗತಿವರೆಗಿನ ಶಾಲೆಗಳೂ ಪುನರಾರಂಭವಾಗಲಿವೆ. ಇಪ್ಪತ್ತು ತಿಂಗಳ ನಂತರ ಮತ್ತೆ ಶಾಲೆಯಲ್ಲಿ ಚಿಣ್ಣರ ಕಲರವ ಕೇಳಿ ಬರಲಿದೆ.

ಕೊರೊನಾ ಪ್ರಕರಣಗಳು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಾಗಲೇ 6ನೇ ತರಗತಿಯಿಂದ ಕ್ಲಾಸ್‌ ಗಳು ನಡೆಯುತ್ತಿವೆ. ಇಂದಿನಿಂದ ಒಂದರಿಂದ ಐದರವರೆಗಿನ ತರಗತಿಗಳು ಕೂಡಾ ಆರಂಭವಾಗುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಶಾಲೆ ಆರಂಭಕ್ಕೂ ಸರ್ಕಾರದ ಕಡೆಯಿಂದ ಕೆಲವೊಂದು ಗೈಡ್‌ ಲೈನ್‌ಗಳನ್ನು  ಜಾರಿ ಮಾಡಲಾಗಿದೆ. ಈ ನಿಯಮಗಳನ್ನು ಶಾಲೆಗಳು ಕಡ್ಡಾಯವಾಗಿ ಪಾಲಿಸಬೇಕಾಗಿದೆ.

ಪ್ರೈಮರಿ ಸ್ಕೂಲ್ ಗೈಡ್ ಲೈನ್ಸ್ :

-ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ
-ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ಒಪನ್
-ಇನ್ನುಳಿದ ಎರಡು ದಿನ ಶಾಲೆ ಕೊಠಡಿ ಗಳ ಸ್ವಚ್ಚತಾ ಕಾರ್ಯ ಸ್ಯಾನಿಟೈಸರ್ ಗೆ ಅವಕಾಶ
-ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ
-ಪಾಸಿಟಿವಿಟಿ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆ, ತಾಲೂಕು ವಲಯಗಳಲ್ಲಿ ಮಾತ್ರ ಶಾಲೆ ಆರಂಭ
– ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ
-ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ದೃಢಿಕರಿಸಬೇಕು
-ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು
-ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ
– ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ತರಗತಿಗೂ ಅವಕಾಶ
-15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು
-ಎರಡು ಡೋಸ್ ಲಸಿಕೆ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ
-ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಕ್ಲಾಸ್…
-ಯಾವುದೇ ಶಾಲೆಯಲ್ಲಿ ಎಲ್.ಕೆ.ಜಿ, ಯು.ಕೆ.ಜಿ ತೆರೆಯಲು ಅವಕಾಶ ಇಲ್ಲ
-ಅಕ್ಟೋಬರ್‌ 25 ರಿಂದ ಅರ್ಧದಿನ ಮಾತ್ರ ತರಗತಿ
-ನವೆಂಬರ್ 2 ನೇ ತಾರೀಕಿನಿಂದ ಪೂರ್ತಿ ದಿನ ತರಗತಿ ನಡೆಸಲು ಸೂಚನೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights