ಬಂಟ್ವಾಳ: ಬಜರಂಗದಳ ಕಾರ್ಯಕರ್ತರಿಂದ ಬಿಜೆಪಿ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ
ಬಜರಂಗದಳದ ಕಾರ್ಯಕರ್ತರು ಎನ್ನಲಾದ ತಂಡವೊಂದು ಬಿಜೆಪಿ ಮುಖಂಡನ ಮನೆಗೆ ನುಗ್ಗಿ, ಆತನ ಮೇಲೆ ತಲವಾರುಗಳಿಂದ ಮಾರಣಾಂತಿಕ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ
ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ನಿವಾಸಿ, ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಕಾಶ್ ಬೆಳ್ಳೂರು ಅವರ ಮೇಲೆ ದಾಳಿ ನಡೆದಿದೆ.
ಬಜರಂಗದಳ ಕಾರ್ಯಕರ್ತರು ಎನ್ನಲಾದ ನಿತಿನ್ ಬಡಗಬೆಳ್ಳೂರು, ನಿಶಾಂತ್ ಬಡಗಬೆಳ್ಳೂರು, ಪವನ್ ಕುಮ್ಡೇಲ್ ಹಾಗೂ ಇನ್ನಿತರರು ಸೇರಿ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ದಾಳಿ ವೇಳೆ ತಡೆಯಲು ಬಂದ ಪ್ರಕಾಶ್ ಅವರ ತಾಯಿ ಮತ್ತು ಅಣ್ಣನಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿ ಪರಾರಿ ಆಗಿದ್ದಾರೆ ಎನ್ನಲಾಗಿದೆ.
ಮಾರಣಾಂತಿಕ ದಾಳಿಗೊಳಗಾದ ಪ್ರಕಾಶ್ ಬೆಳ್ಳೂರು ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.