ಓಟಿಗಾಗಿ ನೋಟು: ಹುಜೂರಾಬಾದ್ ಉಪಚುನಾವಣೆ ರದ್ದುಗೊಳಿಸಲು ಕಾಂಗ್ರೆಸ್‌ ಆಗ್ರಹ!

ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಮತ್ತು ಬಿಜೆಪಿ ಪಕ್ಷಗಳು ಜನರ ಮತಗಳನ್ನು ಸೆಳೆಯಲು ಹಣ ಹಂಚುತ್ತಿವೆ ಎಂದು ಆರೋಪಿಸಿರುವ ಕಾಂಗ್ರೆಸ್‌, ತೆಲಂಗಾಣದ ಹುಜೂರಾಬಾದ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ರದ್ದುಗೊಳಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಮತ್ತು ಪಕ್ಷದ ತೆಲಂಗಾಣ ಉಸ್ತುವಾರಿ ಮಾಣಿಕ್ಕಂ ಠಾಗೋರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಶುಕ್ರವಾರ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದೆ.

ಹುಜೂರಾಬಾದ್ ಉಪಚುನಾವಣೆಯು ಭಾರತದ ಚುನಾವಣಾ ಇತಿಹಾಸದಲ್ಲಿ ಅತ್ಯಂತ ಭ್ರಷ್ಟ ಮತ್ತು ಅತ್ಯಂತ ದುಬಾರಿ ಚುನಾವಣೆಯಾಗಿದೆ ಎಂದು ಸುರ್ಜೆವಾಲಾ ಆರೋಪಿಸಿದ್ದಾರೆ.

“ನಾವು ಚುನಾವಣಾ ಆಯೋಗವನ್ನು ಭೇಟಿ ಮಾಡಿ ಹುಜೂರಾಬಾದ್ ಚುನಾವಣೆಯು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯ ಅಣಕವಾಗಿದೆ ಎಂದು ದೂರಿದ್ದೇವೆ. ಈ ಕ್ಷೇತ್ರದಲ್ಲಿ ಮತಗಳನ್ನು ಖರೀದಿ ನಡೆಯುತ್ತಿದೆ. ಒಂದು ಮತಕ್ಕೆ 10 ಸಾವಿರ ಹಾಗೂ 6 ಸಾವಿರ ರೂ.ಗೆ ನೀಡಲಾಗುತ್ತಿದೆ. ಬಿಜೆಪಿ ಮತ್ತು ಟಿಆರ್‌ಎಸ್ ಭಾರೀ ಭ್ರಷ್ಟಾಚಾರ ನಡೆಸುತ್ತಿವೆ ಎಂದು ಟ್ಯಾಗೋರ್ ಹೇಳಿದ್ದಾರೆ.

ಇದುವರೆಗೆ 3 ಕೋಟಿ ರೂಪಾಯಿಗೂ ಹೆಚ್ಚು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಒಪ್ಪಿಕೊಂಡಿದೆ. “ಈ ಹಿಂದೆ ತಮಿಳುನಾಡಿನ ಆರ್‌ಕೆ ನಗರ ಮತ್ತು ಅರವಕುರಿಚಿಯಲ್ಲಿ ಮಾಡಿದಂತೆ ನಾವು ಎಚ್ಚೆತ್ತುಕೊಂಡು ಈ ಚುನಾವಣೆಗಳನ್ನು ಮುಂದೂಡುವಂತೆ ಚುನಾವಣಾ ಆಯೋಗವನ್ನು ವಿನಂತಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Fact Check: ಬನಾರಸ್‌ನಲ್ಲಿ ಪ್ರಿಯಾಂಕಾ ಗಾಂಧಿ ಆಜಾನ್ ಪಠಿಸಿದ್ದು ಮುಸ್ಲಿಂ ಮತಗಳಿಗಾಗಿಯೇ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights