ನಾವು ಅವರಂತೆಯೇ ಬದುಕಬೇಕು: ಅಪ್ಪು ನೆನಪಲ್ಲಿ ರಮ್ಯಾ ಭಾವನಾತ್ಮಕ ಬರಹ

ಪುನೀತ್ ರಾಜ್‌ಕುಮಾರ್ ಅವರ ಹಠಾತ್ ಸಾವು ಇಡೀ ಕರ್ನಾಟಜವನ್ನೇ ಶೋಕಕ್ಕೆ ಧೂಡಿದೆ. ಚಂದನವನದ ರಾಜಕುಮಾರನನ್ನು ನೆನೆದು ಅಭಿಮಾನಿಗಳು, ಅವರ ಸ್ನೇಹಿತರು, ಸಹೋದ್ಯೋಗಿಗಳು ಕಂಬನಿ ಮಿಡಿಯುತ್ತಿದ್ದಾರೆ. ನಟಿ, ಮಾಜಿ ಸಂಸದೆ ರಮ್ಯಾ ಕೂಡ ಅಪ್ಪು ಅಗಲಿಕೆಗೆ ಅಂಬನಿ ಮಿಡಿದ್ದಾರೆ.

ಪುನೀತ್ ಬಗ್ಗೆ ತಮ್ಮ ಭಾವನೆಗಳನ್ನು ವ್ಯಕ್ತಪಡಿದಿರುವ ರಮ್ಯಾ, ಫೇಸ್‌ಬುಕ‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಬರೆದಿರುವ ಸಾಲುಗಳು ಈ ರೀತಿ ಇವೆ..

ಅಪ್ಪು ಜೊತೆಯಲ್ಲಿ ನಾನು ಕಳೆದ ಬಹಳಷ್ಟು ನೆನಪುಗಳು ಅತ್ಯಮೂಲ್ಯ . ನಿಮ್ಮನ್ನು ನಾವು ಎಂದೆಂದಿಗೂ ನೆನೆಯುತ್ತೇವೆ. ಈ ಕಷ್ಟದ ಸಮಯದಲ್ಲಿ ಭಗವಂತ ಅಶ್ವಿನಿ ಮತ್ತು ಕುಟುಂಬಕ್ಕೆ ಧೈರ್ಯ ಮತ್ತು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮನ್ನು ಅಗಲಿರುವ ಇಂತ ಉನ್ನತ ವ್ಯಕ್ತಿಗೆ ಸಂತಾಪ ಸಲ್ಲಿಸುವ ಸಂದರ್ಭದಲ್ಲಿ ನಾನು ಅವರ ಅಭಿಮಾನಿಗಳ ಜೊತೆ ಇರುವೆನು.

ಅಪ್ಪು ಅವರ ಬಗ್ಗೆ ಹಲವರು ಬರೆದ ಎಲ್ಲಾ ಭಾವನಾತ್ಮಕ ಸಂದೇಶಗಳನ್ನು ಓದುತ್ತಿದ್ದೇನೆ ಮತ್ತು ಅವೆಲ್ಲವೂ ಅಕ್ಷರಸಹ ನಿಜ. ಕೆಲವಂತು ನನ್ನ ಕಣ್ಣಲ್ಲಿ ನೀರು ತಂದಿತು. ಅದುವೇ ಪುನೀತ್. ಹೌದು, ಅವರೇ ಅಪ್ಪು…
ಇವುಗಳನ್ನು ಓದಿದಾಗ ನನ್ನಲ್ಲಿ ಮೂಡಿದ ಕೆಲವು ಆಲೋಚನೆಗಳು ಇವು‌.

ಒಬ್ಬ ವ್ಯಕ್ತಿಯನ್ನು ಜೀವಂತವಾಗಿಡಲು ಉತ್ತಮ ಮಾರ್ಗ ಯಾವುದು? ನೆನಪುಗಳಲ್ಲಿ ಅಲ್ಲ, ಏಕೆಂದರೆ ಅದು ಮಾಸಿ ಹೋಗುತ್ತವೆ, ಆದರೆ ಅವರನ್ನು ಜೀವಂತವಾಗಿಡಲು ಒಂದು ಮಾರ್ಗವಿದೆ- ಅವರು ಬದುಕಿದ ರೀತಿಯಲ್ಲಿ ಪ್ರತಿದಿನ ನಾವು ಬದುಕುವುದು. ಅವರಂತೆಯೇ ನಾವು ಪ್ರೀತಿ ಹಾಗೂ ಕರುಣಾಪೂರ್ಣ ಕಾರ್ಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರ ಮೂಲಕ ಅವರನ್ನು ಜೀವಂತವಾಗಿ ಇಡುವುದು. ದಿನನಿತ್ಯ ನಾವು ಅವರ ವ್ಯಕ್ತಿತ್ವವನ್ನು ಅನುಸರಿಸುವುದರ ಮೂಲಕ ನಾವು ಅವರನ್ನು ನಮ್ಮಲ್ಲಿ ಜೀವಂತವಾಗಿ ಇಡಲು ಸಾಧ್ಯ. ಈ ರೀತಿ ನಾವು ಅವರ ಮೌಲ್ಯಗಳನ್ನು ಮುಂದುವರಿಸಬಹುದು. ನಾವೆಲ್ಲರು ಅಪ್ಪು ರನ್ನು ಪ್ರತಿ ದಿನವೂ ಆರಾಧಿಸೋಣ.

ರಮ್ಯ ಅವರ ಪೋಸ್ಟ್ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights