ಸಮುದ್ರದಲ್ಲಿ ವಾಯುಭಾರ ಕುಸಿತ; ದೀಪಾವಳಿವರೆಗೂ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ!

ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಸುಳಿಗಾಳಿಯಿಂದಾಗಿ ಕಳೆದ ಒಂದು ವಾರದಿಂದ ದೇಶದ ಹಲವು ರಾಜ್ಯಗಳಲ್ಲಿ ಮೋಡ ಕವಿದ ವಾತಾವರಣಿವಿದೆ. ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ ಇನ್ನೂ ಎರಡು-ಮೂರು ದಿನಗಳು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ. ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ 27 -20 ಡಿಗ್ರಿ ಸೆಲ್ಸಿಯಸ್, ಮಂಗಳೂರು 31-25, ಉಡುಪಿ 32-25, ಚಿಕ್ಕಮಗಳೂರು 26-19, ಹಾಸನ 26-19, ಕೋಲಾರ 24-20, ಶಿವಮೊಗ್ಗ 31-22, ದಾವಣಗೆರೆ 31-22, ಧಾರವಾಡ 31-22, ವಿಜಯಪುರ 32-22, ರಾಯಚೂರು 31-23, ಬಳ್ಳಾರಿ 31-23, ಕಲಬುರಗಿ 32-22, ಬೀದರ್ 30-19ರಷ್ಟು ತಾಪಮಾನ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಶನಿವಾರ ಸಂಜೆಯಿಂದಲೂ ಹಾಸನ ಜಿಲ್ಲೆಯ ಹಲವೆಡೆ ಮಳೆರಾಯ ಅಬ್ಬರ ಹೆಚ್ಚಾಗಿದೆ. ಹಾಸನದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ಅಲ್ಲದೆ, ಉಡುಪಿ, ಮಂಗಳೂರು ಮತ್ತು ಉತ್ತರ ಕನ್ನಡ ಕರಾವಳಿ ಭಾಗದಲ್ಲಿಯೂ ಭಾರೀ ಮಳೆಯಾಗುತ್ತಿದೆ ಹಾಗಾಗಿ ಸಮುದ್ರ ತೀರದ ಮತ್ತು ಮೀನುಗಾರರಿಗೆ ಎಚ್ಚರಿಕೆಯ ಸಂದೇಶ ನೀಡಲಾಗಿದೆ.

ಕೇರಳದಲ್ಲಿಯೂ ಭಾರೀ ಮಳೆಯಾಗುತ್ತಿದ್ದು, 5 ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿಯೂ ತಿರುವನಂತಪುರ, ಕೊಟ್ಟಾಯಂ, ಇದುಕ್ಕಿ, ಪಥನಂಮಿಟ್ಟಾ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಅಂದಾಜು 11-20 ಸೆಂ.ಮೀ.ವರೆಗೆ ಮಳೆಯಾಗಲಿದೆ.

ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ; 18 ಮಂದಿ ಸಾವು; ಹಲವರು ನಾಪತ್ತೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.