ಬೈ-ಎಲೆಕ್ಷನ್ ರಿಸಲ್ಟ್: ಸಿಂದಗಿಯಲ್ಲಿ ಬಿಜೆಪಿ; ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ!
ಭಾರೀ ಕೂತುಹಲ ಮೂಡಿಸಿದ್ದ ಕರ್ನಾಟಕದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಜೆಡಿಎಸ್ ಎರಡೂ ಕ್ಷೇತ್ರಗಳಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ.
ಸಿಂದಗಿಯ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 7ನೇ ಸುತ್ತಿನ ಬಳಿಕ 13,425 ಮತಗಳ ಅಂತರ ಸಾಧಿಸಿದ್ದಾರೆ. ಅವರು 32,587 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 19,162 ಮತಗಳನ್ನಷ್ಟೇ ಪಡೆದಿದ್ದಾರೆ. ಇನ್ನು 14 ಸುತ್ತುಗಳ ಮತ ಎಣಿಕೆ ಬಾಕಿ ಇದೆ.
ಹಾನಗಲ್ ನಲ್ಲಿ 6ನೇ ಸುತ್ತಿನ ಮತ ಎಣಿಕೆ ನಂತರ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 1320 ಮತಗಳ ಮುನ್ನಡೆ ಸಾಧಿಸಿದ್ದಾರೆ. ಅವರು 23,344 ಮತ ಗಳಿಸಿದರೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ 22,024 ಮತಗಳನ್ನು ಗಳಿಸಿ ಪೈಪೋಟಿ ನೀಡುತ್ತಿದ್ದಾರೆ.
ಉಪಚುನಾವಣೆ ಎಂದಮೇಲೆ ಆಡಳಿತಾರೂಢ ಪಕ್ಷಕ್ಕೆ ಪ್ರತಿಷ್ಟೆಯದ್ದಾಗಿರುತ್ತದೆ. ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯೂ ಆಗಿರುವುದರಿಂದ ಅವರು ಹಾನಗಲ್ ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರು. ಆದರೂ ಅಲ್ಲಿ ಬಿಜೆಪಿ ಸ್ವಲ್ಪ ಹಿನ್ನಡೆ ಅನುಭವಿಸಿದೆ.
ಇನ್ನು ಸಿಂದಗಿಯಲ್ಲಿ ಕಾಂಗ್ರೆಸ್ ಪರವಾದ ಅಲೆ ಇರುತ್ತಿತ್ತು ಎನ್ನಲಾಗುತ್ತಿತ್ತು. ಆದರೆ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ: ಗೋವಾ ಚುನಾವಣೆ: ಎಎಪಿ ಗೆದ್ದರೆ ಅಯೋಧ್ಯೆ ಮತ್ತು ಇತರ ಕ್ಷೇತ್ರಗಳಿಗೆ ಉಚಿತ ಯಾತ್ರೆ!