ನವೆಂಬರ್‌ನಲ್ಲೂ ಮಳೆಯ ಅಬ್ಬರ; ರಾಜ್ಯದ 8 ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ!

ನವೆಂಬರ್ ತಿಂಗಳಿನಲ್ಲಿಯೂ ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ ಒಂದು ವಾರಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನೂ ಹಲವೆಡೆ ಭೂಕುಸಿತವೂ ಆಗಿದೆ. ಈ ನಡುವೆ ಇನ್ನೂ 2 ದಿನಗಳ ಕಾಲ 8 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿ ಎದ್ದಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಮಾತ್ರವಲ್ಲದೆ, ಚಳಿಯ ಪ್ರಮಾಣವೂ ಹೆಚ್ಚಾಗಿದೆ. ದೀಪಾವಳಿ ದಿನದಂದೂ ಕೂಡ ಭಾರೀ ಮಳೆಯಾಗಿದ್ದು, ಮೈಸೂರು, ಚಾಮರಾಜನಗರ, ಶ್ರೀರಂಗಪಟ್ಟಣ, ಮದ್ದೂರು, ಜಯಪುರ, ಬೆಂಗಳೂರು, ಕಾರ್ಕಳ, ಆಗುಂಬೆ, ಬಾಳೆಹೊನ್ನೂರು, ಮಾಗಡಿ, ಸೊರಬ, ಶೃಂಗೇರಿ, ಬೆಂಗಳೂರು, ಭಟ್ಕಳ, ಶ್ರವಣಬೆಳಗೊಳ, ಮಾಲೂರು, ಮಧುಗಿರಿ, ಹೊನ್ನಾವರ, ಲಿಂಗನಮಕ್ಕಿ, ಮುಲ್ಕಿ, ಬೆಳ್ತಂಗಡಿ, ಹುಂಚದಕಟ್ಟೆ, ಬ್ರಹ್ಮಾವರ, ಶಿರಾಲಿ, ಗೋಕರ್ಣ, ಕೆಆರ್ ಪೇಟೆ, ಪಾಂಡವಪುರ, ಉಡುಪಿ, ಕೋಟ, ಬನವಾಸಿ, ಕುಮಟಾ, ಮಂಡ್ಯ, ಹೊಸಕೋಟೆ, ನೆಲಮಂಗಲ, ದಾವಣಗೆರೆ, ಕುಣಿಗಲ್‌ನಲ್ಲಿ ಭಾರೀ ಮಳೆಯಾಗಿದೆ.  ಮಳೆಯಾಗಿದೆ.

ಇದನ್ನೂ ಓದಿ: ಬೈಕ್‌ನಲ್ಲಿ ನಿಮ್ಮ ಹಿಂಬದಿ ಸವಾರರು ಮಕ್ಕಳಾಗಿದ್ದರೆ ಕೆಲವು ನಿಯಮಗಳು ಕಡ್ಡಾಯ!

ಬೆಂಗಳೂರಿನಲ್ಲಿ ವ್ಯಾಪಾಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಇಡೀ ಬೆಂಗಳೂರು ತತ್ತರಿಸಿ ಹೋಗಿದೆ. ಅಲ್ಲದೇ ನಗರದ ಹಲವಾರು ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿ ಹೋಗಿವೆ.

ರಾಜ್ಯದ ವಿವಿದ ಭಾಗಗಳ ರೈತರು ಬೆಳದಿದ್ದ ಭತ್ತದ ಬೆಳೆ ಕಟಾವಿನ ಹಂತಕ್ಕೆ ತಲುಪಿತ್ತು. ಆದರೆ, ಈ ವೇಳೆ ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭತ್ತ ನೆಲಕಚ್ಚಿದೆ. ಎಕರೆ ಭತ್ತಕ್ಕೆ ಸುಮಾರು 25 ರಿಂದ 30 ಸಾವಿರ ರೂಪಾಯಿ ಹಣ ಖರ್ಚು ಮಾಡಿದ್ದ ರೈತರು ಕಂಗಾಲಾಗಿದ್ದಾರೆ. ಹೀಗಾಗಿ, ಸರ್ಕಾರ ತಮ್ಮ ಸಹಾಯಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಕೇರಳದ ಕೇರಳದ ಐದು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಈಗಾಗಲೇ ತಮಿಳುನಾಡಿನ ಚೆನ್ನೈ, ತಿರುವೆಲ್ಲೂರು, ಚೆಂಗಲ್‌ಪಟ್ಟು, ಕಾಂಚಿಪುರಂ, ಪುದುಕೊಟ್ಟಾಯ್, ಅರಿಯಾಲೂರ್, ಪೆರಂಬಲೂರು, ತಿರುಚಿ, ಕುಡ್ಡಲೋರ್, ವಿಳುಪುರಂ, ಕಲ್ಲಕುರಿಚಿ, ತಾಂಜಾವೂರು, ತಿರುವರೂರು, ವೆಲ್ಲೂರು, ತಿರುಪತ್ತೂರ್, ನಮಕ್ಕಲ್, ಕರೂರು, ನಾಗಪತ್ತಿನಂ, ಮಯಿಲಾದುತುರೈ ಹಾಗೂ ರಾಣಿಪೇಟೆಯಲ್ಲಿ ಶಾಲೆಗಳಿಗೆ ರಜೆ ಘೋಸಷಿಲಾಗಿದೆ.

ಇದನ್ನೂ ಓದಿ: ಕಲಬುರ್ಗಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ನೌಕರನ ಬರ್ಬರ ಹತ್ಯೆ

Spread the love

Leave a Reply

Your email address will not be published. Required fields are marked *