ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ದ ಟೀಂ ಇಂಡಿಯಾ ಭರ್ಜರಿ ಜಯ; 6 ಓವರ್‌ನಲ್ಲೇ ಪಂದ್ಯ ಗೆದ್ದ ತಂಡ!

ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ತಂಡ ಹೊಸ ದಾಖಲೆ ಬರೆದಿದೆ. ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 6 ಓವರ್‌ಗಳು ಮತ್ತು 3 ಬಾಲ್‌ಗಳಲ್ಲಿಯೇ ಪಂದ್ಯವನ್ನು ಅಂತ್ಯಗೊಳಿಸಿ, ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ.

ಈ ಗೆಲುವಿನೊಂದಿಗೆ, ಗ್ರೂಪ್‌ 2ನಲ್ಲಿ ಭಾರತ ತಂಡ ಮೂರನೇ ಸ್ಥಾನಕ್ಕೆ ಏರಿದೆ.

ಶುಕ್ರವಾರ, ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ ಕೇವಲ 6.3 ಓವರ್ ನಲ್ಲಿ 2 ವಿಕೆಟ್ ಕಳೆದುಕೊಂಡು 89ರನ್ ಗಳಿಸಿ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಆ ಮೂಲಕ ಇನ್ನೂ 81 ಎಸೆತಗಳು ಬಾಕಿ ಇರುವಂತೆಯೇ ಭಾರತ ತಂಡ ಪಂದ್ಯ ಜಯಿಸಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇದಕ್ಕೂ ಮೊದಲು ಅಂದರೆ ಅತೀ ಹೆಚ್ಚು ಎಸೆತಗಳಿರುವಂತೆಯೇ ಜಯಗಳಿಸಿದ ತಂಡಗಳ ಪಟ್ಟಿಯಲ್ಲಿ ಶ್ರೀಲಂಕಾ ಅಗ್ರಸ್ಥಾನದಲ್ಲಿದ್ದು, 2014ರಲ್ಲಿ ಚಿತ್ತಗಾಂಗ್ ನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡ ನೆದರ್ಲೆಂಡ್ ವಿರುದ್ಧ ಇನ್ನೂ 90 ಎಸೆತ ಇರುವಂತೆಯೇ ಜಯಗಳಿಸಿತ್ತು. ಇದು ಟಿ20 ವಿಶ್ವಕಪ್ ನಲ್ಲಿ ದಾಖಲಾದ ಅತೀ ವೇಗದ ಜಯ ಎಂಬ ಕೀರ್ತಿಗೆ ಭಾಜನವಾಗಿದೆ.

ಇನ್ನು 2ನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದ್ದು, ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ದುಬೈನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಆಸ್ಟ್ರೇಲಿಯಾ ತಂಡ ಇನ್ನೂ 82 ಎಸೆತಗಳಿರುವಂತೆ ಜಯಗಳಿಸಿತ್ತು. ಇಂದಿನ 81 ಎಸೆತಗಳಿರುವಂತೆ ಜಯಗಳಿಸಿದ ಭಾರತ ತಂಡ ಮೂರನೇ ಸ್ಥಾನದಲ್ಲಿದ್ದು, ನೆದರ್ಲೆಂಡ್ ವಿರುದ್ಧ ಶಾರ್ಜಾದಲ್ಲಿ 77 ಎಸೆತ ಇರುವಂತೆ ಗೆದ್ದ ಶ್ರೀಲಂಕಾ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಟೀಂ ಇಂಡಿಯಾದ ಮುಂದಿನ ನಾಯಕ ಯಾರು; ಮುಂಚೂಣಿಯಲ್ಲಿವೆ ಎರಡು ಹೆಸರುಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights