ಮಗು ಮಾರಾಟ ಆರೋಪ: ಮಾನಕ್ಕೆ ಹೆದರಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನ

ಮಗು ಮಾರಾಟ ಆರೋಪದಿಂದ ನೊಂದ ಕುಟುಂಬದ ಐವರು ಸದಸ್ಯರು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯ 4ನೇ ಕ್ರಾಸ್ ನಿವಾಸಿಗಳಾದ ಅಂಗಡಿ ಮುನಿಯಪ್ಪ ಕುಟುಂಬದ ಸದಸ್ಯರು ವಿಷಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುನಿಯಪ್ಪ ಪುತ್ರಿಗೆ ಮಗು ಮಾರಾಟ ಮಾಡಿದ್ದಾರೆ ಎಂಬ ಆರೋಪ ಹೊರಿಸಲಾಗಿತ್ತು. ಈ ಬಗ್ಗೆ ಮಹಿಳಾ ಠಾಣೆ ಪೋಲಿಸರು ಈ ಬಗ್ಗೆ ವಿಚಾರಣೆ ನಡೆಸಿದರು. ಪ್ರಕರಣ ಪೊಲೀಸ್ ಮೆಟ್ಟಿಲೇರಿದ್ದರಿಂದ ನೊಂದ ತಂದೆ ತಾಯಿ, ಮಗಳು, ಅಳಿಯ ಹಾಗೂ ಮೊಮ್ಮಗಳು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಐವರನ್ನು ಎಸ್‌ಎನ್‌ಆರ್ ಸರ್ಕಾರಿ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದಾರೆ. ಗಲ್ ಪೇಟೆ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Spread the love

Leave a Reply

Your email address will not be published. Required fields are marked *