ಜೆಡಿಎಸ್ ತೊರೆದ ದೇವೇಂದ್ರಪ್ಪ ಕಾಂಗ್ರೆಸ್‌ಗೆ ಸೇರ್ಪಡೆ!

ಜೆಡಿಎಸ್ ಮುಖಂಡ ದೇವೇಂದ್ರಪ್ಪ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ದೇವೇಂದ್ರಪ್ಪ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ದೇವೇಂದ್ರಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ನಂತರ ಮಾತನಾಡಿದ ಡಿಕೆ ಶಿವಕುಮಾರ್, ಬಹಳ ದಿನಗಳಿಂದ ಬಿ. ದೇವೇಂದ್ರಪ್ಪ ಅವರು ಪಕ್ಷಕ್ಕೆ ಸೇರ್ಪಡೆಯಾಗುವುದು ಮುಂದೂಡಿಕೆ ಆಗುತ್ತಲೇ ಬಂದಿತ್ತು. ಅಲ್ಲಂ ವೀರಭದ್ರಪ್ಪ ಅವರ ಸಮಿತಿ ಬೇಷರತ್ ಆಗಿ ದೇವೇಂದ್ರಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಶಿಫಾರಸು ಮಾಡಿತ್ತು. ನಾನು, ರಾಜೇಶ್, ಜಯಸಿಂಹ, ಬಸವರಾಜ ಅವರು ಸೇರಿದಂತೆ ಎಲ್ಲ ಸ್ಥಳೀಯ ನಾಯಕರು ಸಮಾಲೋಚಿಸಿ, ಷರತ್ತು ಇಲ್ಲದೆ ಪಕ್ಷ ಸೇರುವವರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಿದ್ದೆವು. ಹೀಗಾಗಿ, ಇಂದು ದೇವೇಂದ್ರಪ್ಪ ಅವರು ಪಕ್ಷಕ್ಕೆ ಸೇರಿದ್ದಾರೆ ಎಂದು ಹೇಳಿದ್ದಾರೆ.

ಜಾತ್ಯಾತೀತ ಜನತಾದಳ ತೊರೆದು ಕಾಂಗ್ರೆಸ್ ಸೇರುತ್ತಿರುವ ಬಿ. ದೇವೇಂದ್ರಪ್ಪ ಹಾಗೂ ಇತರ ಮುಖಂಡರನ್ನು ನಮ್ಮ ಪಕ್ಷದ ಪರವಾಗಿ ಸ್ವಾಗತಿಸುತ್ತೇನೆ. ಅವರು ಸ್ವಯಿಚ್ಛೆಯಿಂದ ಕಾಂಗ್ರೆಸ್ ಸೇರಿ ಸೇವೆ ಮಾಡಲು ಮುಂದಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ ಇರುವವರು, ಪಕ್ಷ ಸೇರಲು ಬಯಸುವವರು – ಎಲ್ಲರಿಗೂ ಮುಕ್ತ ಅವಕಾಶ ಮಾಡಿಕೊಡಲಾಗುತ್ತದೆ. ಅಧಿಕಾರಕ್ಕಾಗಿ ಯಾವುದೇ ರೀತಿಯ ಷರತ್ತು ಹಾಕುವಂತಿಲ್ಲ. ಷರತ್ತು ಹಾಕುವವರಿಗೆ ನಮ್ಮಲ್ಲಿ ಅವಕಾಶ ಇಲ್ಲ” ಎಂದು ಅವರು ಹೇಳಿದ್ದಾರೆ.

12 ವರ್ಷಗಳ ನಂತರ ಭಾರತೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಎಲ್ಲರಿಗೂ ಮುಕ್ತ ಸದಸ್ಯತ್ವ ನೀಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಇದೇ 14 ರಂದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮದಿನದ ಅಂಗವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹಳೆಯ ಸದಸ್ಯರು ಕೂಡ ಈಗ ತಮ್ಮ ಸದಸ್ಯತ್ವ ನವೀಕರಣ ಮಾಡಿಸಿಕೊಳ್ಳಬಹುದು. ಯೂತ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಎನ್ ಎಸ್ ಯುಐ, ರೈತ ಘಟಕ ಸೇರಿದಂತೆ ಎಲ್ಲ ಘಟಕಗಳಲ್ಲಿ ಮತ್ತೆ ಸದಸ್ಯತ್ವ ಮಾಡಿಕೊಳ್ಳಲು ಅವಕಾಶ ಮಾಡಿಕೊಡುತ್ತಿದ್ದೇವೆ. ಪ್ರತಿಯೊಬ್ಬರೂ  5 ರೂ. ನೀಡಿ ಸದಸ್ಯತ್ವ ಪಡೆಯಬೇಕು. ಆನ್ಲೈನ್ ಹಾಗೂ ಆಫ್ ಲೈನ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಡಿಕೆಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆಯೇ ಸಿಪಿ ಯೋಗೇಶ್ವರ್? ಕೇಸರಿ ನಾಯಕರ ಸ್ಪಷ್ಟನೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights