ವೇತನ ಪರಿಷ್ಕರಣೆಗೆ ಶಿಕ್ಷಕರ ಆಗ್ರಹ; ಬೇಡಿಕೆ ಈಡೇರದಿದ್ದರೆ ತರಗತಿಗಳ ಬಹಿಷ್ಕಾರ!

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು (ಕೆಎಸ್‌ಜಿಇಎ) ಸರ್ಕಾರದಿಂದ ನೇಮಕಗೊಂಡ ಶಿಕ್ಷಕರು ಮತ್ತು ಉಪನ್ಯಾಸಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ 21 ದಿನಗಳ ಗಡುವು ನೀಡಿದೆ. ಬೇಡಿಕೆ ಈಡೇರದಿದ್ದರೆ ತರಗತಿಗಳನ್ನು ಬಹಿಷ್ಕರಿಸಲಾಗುತ್ತದೆ ಎಂದು ಹೇಳಿದೆ.

ಭಾನುವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸುಮಾರು 5,000 ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಸಭೆಯಲ್ಲಿ, ಶಿಕ್ಷಕರ ವೇತನ ಪರಷ್ಕರಣೆಯ ಬೇಡಿಕೆಯು ಕಳೆದ 20 ವರ್ಷಗಳಿಂದ ಹಾಗೆಯೇ ಉಳಿದೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ತರಗತಿಗಳನ್ನು ಬಹಿಷ್ಕರಿಸಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ” ಎಂದು ಕೆಎಸ್‌ಜಿಇಎನ ಅಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.

ಬೇಡಿಕೆಗಳಲ್ಲಿ ಬಡ್ತಿ, ವೇತನ ಪರಿಷ್ಕರಣೆ ಮತ್ತು ವರ್ಗಾವಣೆ ನೀತಿಗಳು ಸೇರಿವೆ.

“ಸರ್ಕಾರಗಳಿಗೆ ಹಲವು ಬಾರಿ ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ ಮತ್ತು ಹಲವಾರು ಸುತ್ತಿನ ಮಾತುಕತೆಗಳನ್ನು ನಡೆಸಲಾಗಿದೆ. ಆದರೆ, ಬೇಡಿಕೆಗಳನ್ನು ಈಡೇರಿಸಲಾಗಿಲ್ಲ. ಆದ್ದರಿಂದ, ತರಗತಿಗಳನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ” ಎಂದು ಷಡಕ್ಷರಿ ಹೇಳಿದ್ದಾರೆ.

ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 75,000 ಕ್ಕೂ ಹೆಚ್ಚು ಪದವೀಧರ ಶಿಕ್ಷಕರಿಗೆ ಜೇಷ್ಠತೆಯನ್ನು ಪರಿಗಣಿಸಿ ಬಡ್ತಿ ನೀಡಬೇಕು. 1998-99ರಲ್ಲಿ ನೇಮಕಗೊಂಡ ಸುಮಾರು 4,000 ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೇತನ ಪರಿಷ್ಕರಣೆ ಮಾಡಬೇಕು ಎಂ ಬ ಪ್ರಮುಖ ಬೇಡಿಕೆ ಸೇರಿದಂತೆ, ಹಲವು ಬೇಡಿಕೆಗಳಿವೆ.

ಇದನ್ನೂ ಓದಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆಯೇ ಸಿಪಿ ಯೋಗೇಶ್ವರ್? ಕೇಸರಿ ನಾಯಕರ ಸ್ಪಷ್ಟನೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights