ಬೀದರ್: ಸರ್ಕಾರಿ ಶಿಕ್ಷಕನ ಮರ್ಮಾಂಗ ಕತ್ತರಿಸಿ ಬರ್ಬರ ಹತ್ಯೆ

ಪ್ರಾಥಮಿಕ ಶಾಲೆಯೊಂದರ ಶಿಕ್ಷಕನ ಮರ್ಮಾಂಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್‌ ಜಿಲ್ಲೆಯ ಔರಾದ್ ಪಟ್ಟಣದಲ್ಲಿ ನಡೆದಿದೆ.

ಹತ್ಯೆಗೀಡಾದ ಶಿಕ್ಷಕರನ್ನು ಮೂಲತ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದವರಾದ 46 ವರ್ಷ ವಯಸ್ಸಿನ ವಿಜಯ್ ಕುಮಾರ್ ಟೀಳೆಕರ್ ಎಂದು ಗುರುತಿಸಲಾಗಿದೆ. ಅವರು  ಔರಾದ್‌ನ ಲಿಡ್ಕರ್ ಕಾಲೋನಿಯಲ್ಲಿ ಚಾಡಿಗೆ ಮನೆಯಲ್ಲಿ ವಾಸವಾಗಿದ್ದರು ಮತ್ತು ಔರಾದ್‌ನ ಕರಂಜಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು ಎಂದು ತಿಳಿದು ಬಂದಿದೆ.

ಬೀದರ ನಾಂದೇಡ್ ರಸ್ತೆಯ ರೈತ ಸಂಪರ್ಕ ಕೇಂದ್ರದ ಸಮೀಪ ಅವರ ಮೃತ ದೇಹ ಪತ್ತೆಯಾಗಿದೆ. ಆದರೆ, ಇದೂವರೆಗೂ ಹತ್ಯೆ ಮಾಡಿದವರು ಯಾರು? ಹತ್ಯೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ ಪಿ ಡಿ.ಎಲ್.ನಾಗರಾಜ್, ಎಎಸ್ ಪಿ ಪೃಥ್ವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಔರಾದ್‌ನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗ್ರಾ.ಪಂ ಕುರ್ಚಿ ಕಾಳಗ; ಅಧ್ಯಕ್ಷರ ಅಕ್ರಮಗಳನ್ನು ಬಯಲಿಗೆಳೆದ ಉಪಾಧ್ಯಕ್ಷೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights