ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಇನ್ನೂ 8 ದಿನಗಳ ಕಾಲ ಭಾರೀ ಮಳೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಪರಿಣಾಮ ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದ ಬೆಂಗಳೂರು, ಮೈಸೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಉತ್ತಿದೆ. ಅಲ್ಲದೆ, ಇನ್ನೂ ಎಂಟು ದಿನಗಳ ಕಾಲ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದು, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಹಾಸನ, ರಾಮನಗರ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಅಲ್ಲದೆ, ಕೊಪ್ಪಳ, ಹಾವೇರಿ, ರಾಯಚೂರು, ಧಾರವಾಡ, ಬೆಳಗಾವಿ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ‌ ಕಾಲ ಹಿಂಗಾರು ಮಳೆ ಚುರುಕಾಗಲಿದ್ದು, ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ.

ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ:

ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರವಾಹದಿಂದ ತಮಿಳುನಾಡಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕೇರಳದಲ್ಲಿಯೂ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅಲ್ಲದೆ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಒಡಿಶಾ ಮತ್ತು ತೆಲಂಗಾಣದಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

One thought on “ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಇನ್ನೂ 8 ದಿನಗಳ ಕಾಲ ಭಾರೀ ಮಳೆ!

Leave a Reply

Your email address will not be published.

Verified by MonsterInsights