ಜನ ಧನ್‌ ಖಾತೆಯಿಂದ ಸಾವಿರಾರು ಕೋಟಿ ಕಳುವಾಗಿದೆ: ಹೆಚ್‌ಡಿಕೆ ಆರೋಪ

ಪ್ರತಿ ಜನ ಧನ್​ ಖಾತೆಯ ಮೂಲಕ ಒಂದು ಅಥವಾ ಎರಡು ರೂಪಾಯಿ ಕದ್ದಿರುವ ಮಾಹಿತಿಯಿದೆ. ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ರೂ. ಕಳುವಾಗಿರುವ ಶಂಕೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಎರಡೂ ಪಕ್ಷಗಳು ಶಾಮೀಲಾಗಿವೆ. ಇದೊಂದು ಅಂತರರಾಷ್ಟ್ರೀಯ ಮಟ್ಟದ ಹಗರಣ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಯಾರೋ ಮಾಹಿತಿ ನೀಡಿದ್ದಾರೆ. ಅವರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ರಾಜಕಾರಣಿಗಳ ಮೇಲಿನ ವಿಶ್ವಾಸ ಕಡಿಮೆಯಾಗಿದೆ. ಜಾಗತಿಕ ಮಟ್ಟದಲ್ಲಿಯೂ ಭಾರತದ ಮೇಲೆ ವಿಶ್ವಾಸ ಕಡಿಮೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಭಿವೃದ್ಧಿ ಕಾರ್ಯಗಳ ಕುರಿತ ಚರ್ಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿರಬಹುದು ಎಂದು ಅಭಿಪ್ರಾಯಪಟ್ಟರು. ಕರ್ನಾಟಕದಲ್ಲಿ ಮೂವರಲ್ಲ ನಾಲ್ವರು ಮುಖ್ಯಮಂತ್ರಿ ಆಗಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ಬಿಟ್‌ ಕಾಯಿನ್‌ ಜಾಮೀನು ಸಿಕ್ಕಿದ್ದು ಹೇಗೆ?

ಬಿಟ್‌ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಎಚ್‌.ಡಿ.ಕುಮಾರಸ್ವಾಮಿಯವರು, ಬಿಟ್​ಕಾಯಿನ್ ಹಗರಣದ ಪ್ರಮುಖ ಆರೋಪಿಗೆ ಜಾಮೀನು ಸಿಕ್ಕಿದೆ. ಇದು ಹೇಗೆ ಸಾಧ್ಯವಾಯಿತು? ಜಾಮೀನು ಕೊಡಲು ವಾದಿಸಿದ್ದು, ಜಾಮೀನು ಕೊಟ್ಟವರು ಯಾರು?” ಎಂದು ಪ್ರಶ್ನಿಸಿದರು.

ಬಿಟ್​ಕಾಯಿನ್ ಪ್ರಕರಣದಲ್ಲಿ ಹಲವರ ಹೆಸರುಗಳು ಕೇಳಿ ಬರುತ್ತಿವೆ ಚಾರ್ಜ್​​ಶೀಟ್​ ಹಾಕುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಲಭ್ಯವಾಗಿದೆ. ದೊಡ್ಡಮಟ್ಟದಲ್ಲೇ ಈ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ. ಅಷ್ಟು ಸುಲಭವಾಗಿ ಆರೋಪಿಗೆ ಜಾಮೀನು ಹೇಗೆ ಸಿಕ್ಕಿತು? ಸರ್ಕಾರಿ ಅಭಿಯೋಜಕರು ಹೇಗೆ ವಾದ ಮಾಡಿದರು ಎಂದು ಎಚ್‌.ಡಿ.ಕುಮಾರಸ್ವಾಮಿ ಕೇಳಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾ ಒಳಗೇ ಮುಂಬೈ ಗುಂಪಿದೆ; ತಂಡವನ್ನೂ ತೊರೆಯಲಿದ್ದಾರೆ ಕೊಹ್ಲಿ: ಮಾಜಿ ಕ್ರಿಕೆಟಿಗ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights