ಕುಸಿದ ಬಿದ್ದವರನ್ನು ಹೆಗಲ ಮೇಲೆ ಹೊತ್ತು ಸಾಗಿದ ಮಹಿಳಾ ಇನ್ಸ್‌ಪೆಕ್ಟರ್‌; ತಮಿಳು ಸಿಎಂ ಪ್ರಶಂ‍ಸೆ!

ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದೂವರೆಗೂ 14 ಜನರು ಮಳೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ, ಮಳೆ-ಚಳಿಯಿಂದ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಇನ್‌ಸ್ಪೆಕ್ಟರ್‌ ರಾಜೇಶ್ವರಿ ಅವರು ಹೆಗಲ ಮೇಲೆ ಹೊತ್ತು ಸಾಗಿ, ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ. ಅವರ ಈ ಸೇವೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅಭಿನಂದಿಸಿದ್ದಾರೆ.

ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ರಾಜೇಶ್ವರಿ ಅವರು ಖುದ್ದು ತಾವೇ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಅವರಿಗೆ ಜಾಲತಾಣದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ, ಕಳೆದ 10 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ತಮಿಳುನಾಡಿನಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಚೆನ್ನೈ ಮಹಾನಗರದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ತಮಿಳುನಾಡಿನಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡಿನಲ್ಲಿ ಪ್ರವಾಹದಿಂದ ತಮಿಳುನಾಡಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕೇರಳದಲ್ಲಿಯೂ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅಲ್ಲದೆ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಒಡಿಶಾ ಮತ್ತು ತೆಲಂಗಾಣದಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯದಲ್ಲೂ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರು, ಮೈಸೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಯೆಲ್ಲೂ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: ಚಳಿಗಾಲದಲ್ಲೂ ಮಳೆಯ ಅಬ್ಬರ; ತುಂಬಿ ತುಳುಕುತ್ತಿವೆ ಡ್ಯಾಂಗಳು; ಜಲಾಶಯಗಳ ಇಂದಿನ‌‌ ನೀರಿನ ಮಟ್ಟ ಹೀಗಿದೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights