ಚುನಾವಣಾ ಸಮೀಕ್ಷೆ: ಉತ್ತರ ಪ್ರದೇಶದಲ್ಲಿ 108 ಸ್ಥಾನಗಳನ್ನು ಕಳೆದುಕೊಳ್ಳಲಿದೆ ಬಿಜೆಪಿ; ಎಸ್‌ಪಿಗೆ ಲಾಭ!

2022ರ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ಬಗ್ಗೆ ಈಗಾಗಲೇ ಕೆಲವು ಸಂಸ್ಥೆಗಳು ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಡೆಸುತ್ತಿವೆ. ಹಲವು ಸಮೀಕ್ಷೆಗಳು, ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಅಲ್ಪ ಮಟ್ಟಿಗೆ ಕಳೆದುಕೊಳ್ಳುತ್ತದೆ ಎಂದು ಹೇಳುತ್ತಿವೆ.

‘ಎಬಿಪಿ-ಸಿ-ವೋಟರ್-ಐಎಎನ್‌ಎಸ್’ ಸಮೀಕ್ಷೆಯ ಪ್ರಕಾರ, ಬಿಜೆಪಿ ಈ ಬಾರಿಯೂ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಆದರೆ, ಅದು ಕಳೆದ ಭಾರಿ ಪಡೆದುಕೊಂಡಿದ್ದ ಸ್ಥಾನಗಳ ಪೈಕಿ, ಈ ಬಾರಿ 108 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಸಮಾಜವಾದಿ ಪಕ್ಷದ ಗಳಿಕೆ ಹೆಚ್ಚಾಗಲಿದೆ.

403 ಸದಸ್ಯ ಬಲವಿರುವ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 217 ಸ್ಥಾನ ಗಳಿಸಲಿವೆ. ಇದು ಕಳೆದ ಬಾರಿಗಿಂತ (325) 108 ಕಡಿಮೆಯಾಗಲಿದೆ. ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು 156 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಹುಜನ ಸಮಾಜ ಪಕ್ಷ 16-20 ಸ್ಥಾನಗಳನ್ನು, ಕಾಂಗ್ರೆಸ್ 6-10 ಸ್ಥಾನಗಳನ್ನು ಗಳಿಸಬಹುದು ಎಂದು ಸಮೀಕ್ಷಾ ವರದಿ ಹೇಳಿದೆ.

ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ಮಧ್ಯೆಯೇ ನೇರ ಹಣಾಹಣಿ ಏರ್ಪಡಲಿದ್ದು, ಎರಡು ಪಕ್ಷಗಳ ನಡುವಣ ಅಂತರ ಸುಮಾರು 60%ರಷ್ಟು ಇರಬಹುದು ಎಂದು ಸಮೀಕ್ಷೆ ತಿಳಿಸಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಪ್ರಚಾರಕ್ಕೆ ಬಿಜೆಪಿ ಖರ್ಚು ಮಾಡಿದ್ದು ಬರೋಬ್ಬರಿ 252 ಕೋಟಿ ರೂ..!

ಉಳಿದಂತೆ, ಉತ್ತರಾಖಂಡದಲ್ಲಿ ಬಿಜೆಪಿ 38 ಸ್ಥಾನಗಳು ಮತ್ತು ಕಾಂಗ್ರೆಸ್‌ 32 ಸ್ಥಾನಗಳನ್ನು ಗಳಿಸುವ ನಿರೀಕ್ಷೆ ಇದೆ ಎಂದು ಸಮೀಕ್ಷೆ ಹೇಳಿದೆ.

ಪಂಜಾಬ್‌ನಲ್ಲಿ ಕಾಂಗ್ರೆಸ್‌ ಮತ್ತು ಎಎಪಿ ನಡುವೆ ಭಾರೀ ಪೈಪೋಟಿ ಇದ್ದು, ಈ ಬಾರಿಯ ಚುನಾವಣೆಯಲ್ಲಿ ಎಎಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಪಂಜಾಬ್‌ ವಿಧಾನ ಸಭೆಯ 117 ಸ್ಥಾನಗಳ ಪೈಕಿ, ಎಎಪಿ 51 ಸ್ಥಾನಗಳು, ಕಾಂಗ್ರೆಸ್ 46 ಸ್ಥಾನಗಳು ಮತ್ತು ಅಕಾಲಿ ದಳ 20 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.

ಗೋವಾದ ವಿಧಾನಸಭೆಯ 40 ಸ್ಥಾನಗಳಲ್ಲಿ ಬಿಜೆಪಿ 21 ಸ್ಥಾನಗಳು, ಕಾಂಗ್ರೆಸ್‌ 4, ಎಎಪಿಗೆ 5 ಹಾಗೂ ಇತರರು 10 ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ.

ಮಣಿಪುರ ವಿಧಾನಸಭೆಯಲ್ಲಿ 60 ಸದಸ್ಯರ ಪೈಕಿ, ಬಿಜೆಪಿ 27 ಸ್ಥಾನಗಳು, ಕಾಂಗ್ರೆಸ್ 22 ಸ್ಥಾನಗಳನ್ನು ಗಳಿಸುವ ನಿರೀಕ್ಷೆ ಇದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯ 4 ಗಂಟೆಗಳ ಭೇಟಿಗಾಗಿ 23 ಕೋಟಿ ರೂ. ಖರ್ಚು ಮಾಡುತ್ತಿದೆ ಮ.ಪ್ರದೇಶ ಸರ್ಕಾರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights