ಬೆಂಗಳೂರು, ಮಲೆನಾಡು, ಕರಾವಳಿಯಲ್ಲಿ ಇನ್ನೂ 4 ದಿನ ಭಾರೀ ಮಳೆ; ಚಳಿಯೂ ಅಧಿಕ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಎದ್ದಿರುವ ಸುಳಿಗಾಳಿಯಿಂದ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ನವೆಂಬರ್ 16ರವರೆಗೂ ರಾಜ್ಯದ ಮಲೆನಾಡು, ಕರಾವಳಿ ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.

ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದ್ದು, ಈ ಎಲ್ಲಾ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಕೂಡ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ.

ಮುಂದಿನ 3 ದಿನ ತಮಿಳುನಾಡು, ಒಡಿಶಾ, ಆಂಧ್ರಪ್ರದೇಶದ ಕರಾವಳಿ, ಕಾರೈಕಲ್ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇಂದು ಕೇರಳ, ಕರ್ನಾಟಕದ ಕರಾವಳಿ ಮತ್ತು ಅಂಡಮಾನ್ ದ್ವೀಪ, ದಕ್ಷಿಣ ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಗಂಗಾ-ಪಶ್ಚಿಮ ಬಂಗಾಳದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ಪ್ರತ್ಯೇಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಬಳ್ಳಾರಿ: ಗಣಿಗಾರಿಕೆಯಿಂದ ಉಸಿರುಗಟ್ಟಿದೆ ಗ್ರಾಮ; ಸುಲ್ತಾನ್‌ಪುರದ ಗ್ರಾಮಸ್ಥರ ಸ್ಥಳಾಂತರ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights