ಮುಖ್ಯಮಂತ್ರಿ ಆಗುವ ಬಯಕೆಯನ್ನು ರಾಹುಲ್‌ಗಾಂಧಿಗೆ ತಿಳಿಸಿದ್ದೇನೆ: ಪರಮೇಶ್ವರ್

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಇತ್ತೀಚೆಗಷ್ಟೇ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದ ಮಾಜಿ ಡಿಸಿಎಂ ಡಾ. ಪರಮೇಶ್ವರ್‌ ಅವರು ಮುಖ್ಯಮಂತ್ರಿಯಾಗುವ ತಮ್ಮ ಬಯಕೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ಹೇಳಿದ್ದಾರೆ.

ಕಳೆದ ಕೆಲ ತಿಂಗಳುಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದೆ. ರಾಹುಲ್ ಗಾಂಧಿ ಅವರು ತಮ್ಮನ್ನು ಏತಕ್ಕಾಗಿ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಸದ್ದು ಮೊಳಗುತ್ತಿದೆ ಎಂದು ತಮ್ಮನ್ನು ಪ್ರಶ್ನಿಸಿದ್ದರು. ಆ ವೇಳೆ, ನಾನೂ ಕೂಡ ರಾಜ್ಯದ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿಯುವ ಬಯಕೆಯನ್ನು ಇರುವುದನ್ನು ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇನ್ನು ಈ ಬಗ್ಗೆ ಇಷ್ಟ ಇರುವವರು ಹಾಗೂ ಇಷ್ಟ ಇಲ್ಲದೆ ಇರುವವರು ಕೂಡ ಚರ್ಚೆಯಲ್ಲಿ ಭಾಗವಹಿಸುತ್ತಾರೆ. ಮುಂದಿನ ದಿನದಲ್ಲಿ ಅದೃಷ್ಟ ಯಾರಿಗೆ ಒಲಿಯುತ್ತದೆ ನೋಡೋಣ ಎನ್ನುವ ಮೂಲಕ ದಲಿತ ಸಿಎಂ ವಿರೋಧಿ ಬಣಕ್ಕೆ ನೇರ ಎಚ್ಚರಿಕೆಯನ್ನು ಸಹ ಪರಂಮೇಶ್ವರ್ ಅವರು ರವಾನಿಸಿದ್ದಾರೆ.

ಇದನ್ನೂ ಓದಿ: ಬಸ್‌ ಮೇಲಿದ್ದ ಪುನೀತ್‌ ಚಿತ್ರಕ್ಕೆ ಮುತ್ತಿಟ್ಟು, ಕಣ್ಣೀರು ಹಾಕಿದ ವೃದ್ದೆ: ವಿಡಿಯೋ ವೈರಲ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights