ಉತ್ತರ ಪ್ರದೇಶದಲ್ಲಿ ಹಸುಗಳಿಗೆ ಆಂಬ್ಯುಲೆನ್ಸ್ ಸೇವೆ ಪ್ರಾರಂಭವಾಗಲಿದೆ: ಸಚಿವ ಲಕ್ಷ್ಮೀ ನಾರಾಯಣ ಚೌಧರಿ

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಹಸುಗಳಿಗೆ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಲು ಉತ್ತರ ಪ್ರದೇಶ ಸರ್ಕಾರ ಸಿದ್ಧವಾಗಿದೆ ಎಂದು ರಾಜ್ಯ ಹೈನುಗಾರಿಕೆ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ಲಕ್ಷ್ಮೀ ನಾರಾಯಣ ಚೌಧರಿ ಭಾನುವಾರ ಹೇಳಿದ್ದಾರೆ.

ಈ ಹೊಸ ಯೋಜನೆಗೆ 515 ಆಂಬ್ಯುಲೆನ್ಸ್‌ಗಳು ಸಿದ್ಧವಾಗಿವೆ, ಬಹುಶಃ, ಇಂತಹ ಯೋಜನೆ ದೇಶದಲ್ಲೇ ಮೊದಲನೆಯದು ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ ವೇಳೆಗೆ ಯೋಜನೆಯು ಪ್ರಾರಂಭವಾಗಲಿದ್ದು, ದೂರುಗಳನ್ನು ಸ್ವೀಕರಿಸಲು ಲಕ್ನೋದಲ್ಲಿ ಕಾಲ್ ಸೆಂಟರ್ ಅನ್ನು ಸ್ಥಾಪಿಸಲಾಗುವುದು. “ಈ ಸೇವೆಗಾಗಿ 112 ತುರ್ತು ಸೇವಾ ಸಂಖ್ಯೆಗೆ ಕರೆಮಾಡಬೇಕು. ಹೊಸ ಸೇವೆಯು ಗಂಭೀರವಾಗಿ ಅಸ್ವಸ್ಥಗೊಂಡ ಹಸುಗಳಿಗೆ ತ್ವರಿತ ಚಿಕಿತ್ಸೆಗೆ ಅನುವು ಮಾಡಿಕೊಡುತ್ತದೆ” ಎಂದು ಅವರು ತಿಳಿಸಿದ್ದಾರೆ.

ಸೇವೆಯನ್ನು ಕೋರಿದ 15 ರಿಂದ 20 ನಿಮಿಷಗಳ ಅವಧಿಯಲ್ಲಿ ಪಶುವೈದ್ಯರು ಮತ್ತು ಇಬ್ಬರು ಸಹಾಯಕರೊಂದಿಗೆ ಆಂಬ್ಯುಲೆನ್ಸ್ ಸ್ಥಳಕ್ಕೆ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಅಲ್ಲದೆ, ಉಚಿತ ಉತ್ತಮ ಗುಣಮಟ್ಟದ ಭ್ರೂಣ ಕಸಿ ತಂತ್ರಜ್ಞಾನವನ್ನು ಒದಗಿಸುವುದರೊಂದಿಗೆ ರಾಜ್ಯದ ತಳಿ ಸುಧಾರಣಾ ಕಾರ್ಯಕ್ರಮಕ್ಕೆ ಉತ್ತೇಜನ ಸಿಗುತ್ತದೆ ಎಂದು ಅವರು ಹೇಳಿದ್ದಾರೆ.

ಭ್ರೂಣ ಕಸಿ ತಂತ್ರಜ್ಞಾನವು ಬರಡಾದ ಹಸುಗಳನ್ನು ಸಹ ಹೆಚ್ಚು ಹಾಲು ನೀಡುವ ಪ್ರಾಣಿಗಳಾಗಿ ಪರಿವರ್ತಿಸುತ್ತದೆ ಎಂದು ಸಚಿವರು ಹೇಳಿದ್ದಾರೆ.

ಈ ಯೋಜನೆಯು ಮಥುರಾ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾಲು ಕೊಡುತ್ತಿಲ್ಲ ಸಾಕಿದ ಎಮ್ಮೆ; ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ರೈತ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights