ಬಿಜೆಪಿಗೆ ಗುಡ್‌-ಬೈ ಹೇಳಿ, ಕಾಂಗ್ರೆಸ್‌ಗೆ ಮರಳಿದ ನಟಿ ಭಾವನಾ!

ಈ ಹಿಂದೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ನಟಿ ಭಾವನಾ ಅವರು ಮತ್ತೆ ಕಾಂಗ್ರೆಸ್‌ಗೆ ಮರಳಿದ್ದಾರೆ. ಭಾವನಾ ಅವರು ಪಕ್ಷಕ್ಕೆ ಮರಳಿರುವುದನ್ನು ಅಭಿನಂದಿಸಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಂದೀಪ್‌ ಸುರ್ಜೇವಾಲ ಅವರು ಭಾವನಾ ಅವರಿಗೆ ಶುಭಾಶಯ ತಿಳಿಸಿದ್ದಾರೆ.

ಭಾವನಾ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಅವರು ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದರು. ಅದರೆ, ಪಕ್ಷವು ಅವರಿಗೆ ಟಿಕೆಟ್ ನೀಡಲು ನಿರಾಕರಿಸಿತ್ತು. ಹೀಗಾಗಿ, 2018ರ ಮೇ ತಿಂಗಳಲ್ಲಿ ಪಕ್ಷ ತೊರೆದ ಅವರು ಬಿಜೆಪಿ ಸೇರಿದ್ದರು.

ನಂತರ ನಡೆದ ಹಲವು ಚುನಾವಣೆಗಳಲ್ಲಿ ಅವರು ಬಿಜೆಪಿ ಪರ ಕ್ಯಾಂಪೇನ್‌ಗಳಲ್ಲಿ ಭಾಗವಹಿಸಿದ್ದರು. ಆದರೆ, ಇದೀಗ ಅವರು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್‌ಗೆ ಮರಳಿದ್ದಾರೆ.

ಮಾತೃ ಪಕ್ಷಕ್ಕೆ ಮರಳಿದ ಭಾವನಾ ರಾಮಣ್ಣ: ಕಮಲ ತೊರೆದು 'ಕೈ' ಹಿಡಿದ ನಟಿ!

ಅವರಿಗೆ ಶುಭಾಶಯ ಕೋರಿ ಟ್ವೀಟ್‌ ಮಾಡಿರುವ ಸರ್ಜೇವಾಲ್‌, ಕಾಂಗ್ರೆಸ್‌ನ ಮಾಜಿ ಕಾರ್ಯಕರ್ತೆ ಹಾಗೂ ನಟಿ ಭಾವನಾ ರಾಮಣ್ಣ ಅವರು ನನ್ನನ್ನು ಭೇಟಿಯಾದರು. ಅವರು ಪಕ್ಷಕ್ಕೆ ಮರಳಿದ್ದಾರೆ. ಅವರು ಕರ್ನಾಟಕದಲ್ಲಿ ಪಕ್ಷಕ್ಕಾಗಿ ದುಡಿಯುವ ಸಂಕಲ್ಪವನ್ನು ಮಾಡಿದ್ದಾರೆ ಎಂದು ಪೋಸ್ಟ್‌ ಮಾಡಿದ್ದಾರೆ.

ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್‌ ಪಕ್ಷವು ಪ್ರಾಬಲ್ಯ ಸಾಧಿಸಲಿದೆ ಎಂದು ನಾನು ಭಾವಿಸಿದ್ದೇನೆ. ಭಾವನಾ ಅವರಿಗೆ ಶುಭಾಶಯಗಳು ಎಂದು ಸುರ್ಜೇವಾಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಆಗುವ ಬಯಕೆಯನ್ನು ರಾಹುಲ್‌ಗಾಂಧಿಗೆ ತಿಳಿಸಿದ್ದೇನೆ: ಪರಮೇಶ್ವರ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.