ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಪ್ರಧಾನಿಯವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಹೇಳಿದ ತಕ್ಷಣ ಪ್ರತಿಭಟನೆ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಅಧಿಕೃತವಾಗಿ ರದ್ದುಪಡಿಸುವ ದಿನಕ್ಕಾಗಿ ಕಾಯುತ್ತೇವೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, “ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು ಮನೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ಒಂದು ವರ್ಗದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಮಗೆ ಸಾಧ್ಯವಾಗಲಿಲ್ಲ ಎಂದು ನಾನು ದೇಶವಾಸಿಗಳಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ರೈತ ನಾಯಕ ರಾಕೇಶ್ ಟಿಕಾಯತ್ ” ಆಂದೋಲನವನ್ನು ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ಅಧೀಕೃತವಾಗಿ ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಸರ್ಕಾರವು MSP ಜೊತೆಗೆ ರೈತರ ಇತರ ಸಮಸ್ಯೆಗಳನ್ನು ಚರ್ಚಿಸಬೇಕು” ಎಂದಿದ್ದಾರೆ.

“ಒಂದು ವರ್ಷದ ಬಳಿಕ ಗೆದ್ದಿದ್ದೇವೆ. ಮೂರು ವಿವಾದಿತ ಕಾಯ್ದೆಗಳನ್ನು ವಾಪಸ್‌ ಪಡೆಯಲು ಮೋದಿ ಸರ್ಕಾರ ನಿರ್ಧರಿಸಿದೆ. ಇದು ರೈತರಿಗೆ ಸಂದ ಗೆಲುವು” ಎಂದು ಕಿಸಾನ್‌ ಏಕ್ತಾ ಮೋರ್ಚಾ ಟ್ವೀಟ್‌ ಮಾಡಿದೆ.ರಾ

ಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶ ಸೇರಿದಂತೆ ದೇಶದ ಸಾವಿರಾರು ರೈತರು ಕಳೆದ ವರ್ಷ ನವೆಂಬರ್ 26 ರಿಂದ ಸಿಂಘು ಮತ್ತು ಟಿಕ್ರಿ ಸೇರಿದಂತೆ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights