ರೈತ ಹೋರಾಟ: ಸರ್ವಾಧಿಕಾರಿ ಎಷ್ಟೇ ಬಲಶಾಲಿಯಾಗಿದ್ದರೂ, ಜನಶಕ್ತಿಗೆ ಮಣಿಯಲೇಬೇಕು: ಸಿದ್ದರಾಮಯ್ಯ

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಮೋದಿ ತಿಳಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ, ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರೈತ ಹೋರಾಟಗಾರರಿಗೆ ಅಭಿನಂದನೆಗಳು ಜೈಕಿಸಾನ್ ಎಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೃಷಿ ಕಾಯ್ದೆ ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಬಿಜೆಪಿ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು, ಇದುವೇ ರೈತರ ಸ್ವಾತಂತ್ರೋತ್ಸವ ಎಂದಿದ್ದಾರೆ.

ಕೃಷಿ ಕಾಯ್ದೆ ಅಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರೆಯಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನತೆ ಅಣಿಯಾಗಬೇಕು ಎಂದು ಹೇಳಿದ್ದಾರೆ.
ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights