ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ; 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ!

ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಜಿಟಿಜಿಟಿ ಮಳೆಯಾಗಲಿದ್ದು, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು- ಸಿಡಿಲು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶನಿವಾರ‌ ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೊಂಚ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗುವ ಸಾಧ್ಯತೆಗಳಿವೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮುಂಜಾಗ್ರತ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ 13 ಜಿಲ್ಲೆಗಳಿಗೆ ಅಲರ್ಟ್ ಸಂದೇಶ ರವಾನಿಸಲಾಗಿದ್ದು, ಎಚ್ಚರಿಕೆಯ ವಹಿಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಬಹುತೇಕ ನದಿಗಳು, ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದು, ನೀರು ಹರಿಯುತ್ತಿದೆ. ಇತ್ತ ನಿರಂತರ ಮಳೆ ಹಿನ್ನೆಲೆ ಕೃಷಿ ಭೂಮಿಯಲ್ಲಿ ನೀರು ಶೇಖರಣೆಯಾಗುತ್ತಿರುವ ಕಾರಣ ರೈತರು ಸಂಕಷ್ಟದಲ್ಲಿ ಸಿಲುಕಿದ್ದು, ಬೆಳೆದ ಬೆಳೆಗಳು ನೀರು ಪಾಲಾಗಿವೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.