ಅತ್ಯಾಚಾರ ಎಸಗಿದ ಆರೋಪಿಯು ಸಂತ್ರಸ್ತೆಯನ್ನೇ ಮದುವೆಯಾದರೂ ಪ್ರಕರಣ ರದ್ದಾಗುವುದಿಲ್ಲ: ಕರ್ನಾಟಕ ಹೈಕೋರ್ಟ್‌

ಅತ್ಯಾಚಾರ ಎಸಗಿದ ಆರೋಪಿ ಸಂತ್ರಸ್ತೆಯನ್ನೇ ಮದುವೆಯಾದರೂ, ಆತನ ವಿರುದ್ದ ದಾಖಲಾದ ಪ್ರಕರಣ ರದ್ದಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

ಅತ್ಯಾಚಾರಿಯು ಸಂತ್ರಸ್ತೆಯನ್ನು ಮದುವೆಯಾಗಬಹುದು. ಆದರೆ, ಇಂತಹ ಘಟನೆಗಳೂ ಸಮಾಜ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ದ ದಾಖಲಾದ ಅತ್ಯಾಚಾರ ಪ್ರಕರಣಗಳನ್ನು ಕೈಬಿಡಲಾಗುವುದಿಲ್ಲ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ.  ಪೋಕ್ಸೋ ಪ್ರಕರಣ ಕೈಬಿಡಲು ಹೈಕೋರ್ಟ್ ನಿರಾಕರಿಸಿದೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಆರೋಪಿಯೊಬ್ಬ ಸಂತ್ರಸ್ತೆಯನ್ನು ಮದುವೆಯಾಗಿದ್ದು, ಆತ ತನ್ನ ವಿರುದ್ದ  ಪೋಕ್ಸೋ ಕಾಯಿದೆಯಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ.

ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರ ಪೀಠ, ಆರೋಪಿ ವಿರುದ್ಧದ ಕೇಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ.

ಸಂತ್ರಸ್ಥೆಯನ್ನು ಆರೋಪಿ ಮದುವೆಯಾಗಿದ್ದರೂ ಕೂಡ ಅತ್ಯಾಚಾರ ಪ್ರಕರಣ ರದ್ದಾಗುವುದಿಲ್ಲವೆಂದು ಸ್ಪಷ್ಟಪಡಿಸಿರುವ ಕೋರ್ಟ್‌, ಪ್ರಕರಣ ರದ್ದು ಮಾಡಿದರೆ ಸಮಾಜದ ಮೇಲೆ ಪರಿಣಾಮ ಗಂಭೀರ ಪರಿಣಾಮ ಉಂಟಾಗುತ್ತದೆ. ಹೀಗಾಗಿ  ಪ್ರಕರಣದಲ್ಲಿ ಆರೋಪಿ ಮತ್ತು ಸಂತ್ರಸ್ಥೆ ರಾಜಿಯಾದ ಮಾತ್ರಕ್ಕೆ ಕೇಸ್ ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಅಪ್ರಾಪ್ತೆಯನ್ನು ಪ್ರೀತಿಸಿದ್ದ ಆರೋಪಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದು, ಅತ್ಯಾಚಾರ ಎಸಗಿದ್ದ. ಬಾಲಕಿ ಗರ್ಭಿಣಿಯಾದ ನಂತರ ಆಕೆಯನ್ನು ಅಪಹರಿಸಿದ್ದ. ಬಾಲಕಿಯ ಕುಟುಂಬದವರು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೊಲ್ಲಾಪುರದಲ್ಲಿದ್ದ ಆತನನ್ನು ಬಂಧಿಸಿ ಅತ್ಯಾಚಾರ, ಅಪಹರಣ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ಕೆಲವು ತಿಂಗಳುಗಳ ಹಿಂದೆ ಆರೋಪಿ ವಿರುದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಪ್ರಕರಣವನ್ನು ರದ್ದುಪಡಿಸಬೇಕೆಂದು ಆರೋಪಿ ಮತ್ತು ಸಂತ್ರಸ್ಥೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಮದುವೆಯಾಗಿ ಒಂದು ಮಗುವಿದೆ. ಈ ಪ್ರಕರಣ ರದ್ದುಪಡಿಸಿ ಇಬ್ಬರೂ ಒಟ್ಟಿಗೆ ಬಾಳಲು ಅವಕಾಶ ಕಲ್ಪಿಸಬೇಕೆಂದು ಅರ್ಜಿದಾರರ ಪರ ವಕೀಲರು ಕೋರಿದ್ದರು.

Read Also: ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವತಿಯನ್ನು ಅತ್ಯಾಚಾರಗೈದು ಕೊಂದ ತಂದೆ; ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಪತಿಯ ಮೃತದೇಹ ಪತ್ತೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights