ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳ ಎದುರೇ ತಂದೆಯ ಭೀಕರ ಕೊಲೆ

ಇಬ್ಬರು ಹೆಣ್ಣುಮಕ್ಕಳ ಎದುರೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.

ಹತ್ಯೆಯಾದ ವ್ಯಕ್ತಿಯನ್ನು 46 ವರ್ಷದ ದೀಪಕ್‌ ಕುಮಾರ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಆತ ಮೂಲತಃ ಬಿಹಾರದವರಾಗಿದ್ದಾರೆ. ಅವರು ಜಿಕೆವಿಕೆಯನ್ನು ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಅವರು ಯಲಹಂಕ  ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ವೀರ್ ಸಾಗರ್ ರಸ್ತೆಯಲ್ಲಿ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಭಾನುವಾರ ತಡರಾತ್ರಿ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು, ಆತನ ಮೇಲೆ ಮುಚ್ಚುಗಳಿಂದ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದಾರೆ.

ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಹುಡುಕುತ್ತಿದ್ದಾರೆ. ಕೊಲೆಗೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಇದನ್ನೂ ಓದಿ: ಮುಂದುವರೆದ ಮಳೆ ಅಬ್ಬರ; ಧಾರಾಕಾರ ಮಳೆಗೆ ನಲುಗಿದ ಬೆಂಗಳೂರು!

Spread the love

Leave a Reply

Your email address will not be published. Required fields are marked *