Fact Check: T-20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ದ ಪಾಕ್‌ ಸೋತಾಗ ಆಶಿಸ್‌ ಕ್ರಿಕೆಟಿಗ ವಂದೇ ಮಾತರಂ ಘೋಷಣೆ ಕೂಗಿದರೇ?

ಇತ್ತೀಚಿನ T20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಆಸ್ಟ್ರೇಲಿಯಾ ಜಯಗಳಿಸಿತು. ಈ ಬಳಿಕ, ಆಸ್ಟ್ರೇಲಿಯನ್ ಕ್ರಿಕೆಟಿಗರೊಬ್ಬರು ವಂದೇ ಮಾತರಂ ಘೋಷಣೆ ಗಳನ್ನು ಕೂಗುತ್ತಿರುವ ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಈ ಲೇಖನದ ಮೂಲಕ ಆ ವೀಡಿಯೊದ ಸತ್ಯವನ್ನು ಪರಿಶೀಲಿಸೋಣ.

ಪ್ರತಿಪಾದನೆ: ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ T20 ವಿಶ್ವಕಪ್ ಸೆಮಿಫೈನಲ್ ಪಂದ್ಯದ ನಂತರ ಆಸ್ಟ್ರೇಲಿಯನ್ ಕ್ರಿಕೆಟಿಗರೊಬ್ಬರು ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋ.

ಸತ್ಯ: 2021 ರ ಜನವರಿಯಲ್ಲಿ ಗಬ್ಬಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಜಯಗಳಿಸಿತು. ಆ ಸಮಯದಲ್ಲಿ, ಸ್ಟ್ಯಾಂಡ್‌ನಲ್ಲಿ ಆಸ್ಟ್ರೇಲಿಯಾದ ಅಭಿಮಾನಿಯೊಬ್ಬರು ‘ಭಾರತ್ ಮಾತಾಕಿ ಜೈ’, ‘ವಂದೇ ಮಾತರಂ’ ಎಂದು ಘೋಷಣೆ ಕೂಗಿದ್ದರು. ಈ ಘೋಷಣೆಗಳನ್ನು ಕೂಗಿದ್ದು ಆಸ್ಟ್ರೇಲಿಯಾದ ಕ್ರಿಕೆಟಿಗನಲ್ಲ. ಅಲ್ಲದೆ, ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಇತ್ತೀಚಿನ T20 ವಿಶ್ವಕಪ್ ಸೆಮಿಫೈನಲ್ ಪಂದ್ಯಕ್ಕೂ ಈ ವೀಡಿಯೊಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ, ಪೋಸ್ಟ್‌ನಲ್ಲಿ ಹೇಳಿರುವ ಪ್ರತಿಪಾದನೆ ತಪ್ಪಾಗಿದೆ.

ವೀಡಿಯೊದಲ್ಲಿ ‘ವಂದೇ ಮಾತರಂ’ ಮತ್ತು ‘ಭಾರತ್ ಮಾತಾಕಿ ಜೈ’ ಘೋಷಣೆಗಳು ಕೂಗಿದ್ದು ಆಸ್ಟ್ರೇಲಿಯಾದ ಕ್ರಿಕೆಟಿಗನಲ್ಲ. ಆದರೆ ಹಳೆಯ ಆಸ್ಟ್ರೇಲಿಯಾದ ಜೆರ್ಸಿಯನ್ನು ಧರಿಸಿರುವ ಅಭಿಮಾನಿ. ಈ ವರ್ಷದ ಜನವರಿಯಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ವೇಳೆ ಈ ಘಟನೆ ನಡೆದಿದೆ.

ಈ ವೀಡಿಯೊ ಕುರಿತು ಮಾಹಿತಿಗಾಗಿ Google ನಲ್ಲಿ ಕೀವರ್ಡ್‌ಗಳ ಮೂಲಕ ಹುಡುಕಿದಾಗ, ಈ ವೀಡಿಯೊ ಕುರಿತು ವರದಿ ಮಾಡಿದ ಹಲವಾರು ಸುದ್ದಿ ಲೇಖನಗಳು ದೊರೆತಿವೆ. ಈ ವರದಿಗಳ ಪ್ರಕಾರ, ಜನವರಿ 2021 ರಲ್ಲಿ ಗಬ್ಬಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಜಯಗಳಿಸಿತು. ಆ ನಂತರ ಸ್ಟ್ಯಾಂಡ್‌ನಲ್ಲಿರುವ ಆಸ್ಟ್ರೇಲಿಯಾದ ಅಭಿಮಾನಿಯೊಬ್ಬರು ‘ಭಾರತ್ ಮಾತಾಕಿ ಜೈ’ ಮತ್ತು ‘ವಂದೇ ಮಾತರಂ’ ಎಂದು ಘೋಷಣೆ ಕೂಗಿದರು. ನಂತರ ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಆ ಸಮಯದಲ್ಲಿ ಅನೇಕ ಮಾಧ್ಯಮ ಸಂಸ್ಥೆಗಳು ಈ ವೀಡಿಯೊ ಬಗ್ಗೆ ವರದಿ ಮಾಡಿವೆ. ಆ ಕೆಲವು ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಇತ್ತೀಚೆಗೆ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಸೋಲು ಕಂಡಿತು. ಆದರೆ ಇತ್ತೀಚೆಗೆ ನಡೆದ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ತಂಡವು ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿತು. ಆ ನಂತರ ಈ ವೀಡಿಯೊವನ್ನು ಮತ್ತೆ ಹಂಚಿಕೊಳ್ಳಲಾಗುತ್ತಿದೆ.

ಅಂತಿಮವಾಗಿ, ಆಸ್ಟ್ರೇಲಿಯಾದ ಅಭಿಮಾನಿಯೊಬ್ಬರು ವಂದೇ ಮಾತರಂ ಎಂದು ಘೋಷಣೆ ಕೂಗಿದ ಹಳೆ ವಿಡಿಯೋವನ್ನು ಪ್ರಸ್ತುತ T20 ವಿಶ್ವಕಪ್‌ಗೆ ಲಿಂಕ್ ಮಾಡಿ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವತಿಯನ್ನು ಅತ್ಯಾಚಾರಗೈದು ಕೊಂದ ತಂದೆ; ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಪತಿಯ ಮೃತದೇಹ ಪತ್ತೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights