ಬಿಟ್ಟೂಬಿಡದೆ ಕಾಡುತ್ತಿದೆ ಮಳೆ; ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ!

ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳು ಮಳೆಯಿಂದ ತತ್ತರಿಸಿ ಹೋಗಿವೆ. ಮೈಸೂರಿನ ಚಾಮುಂಡಿ ಬೆಟ್ಟ ಸೇರಿದಂತೆ ಮಲೆನಾಡಿನ ವಿವಿಧ ಗುಡ್ಡಗಾಡಿನಲ್ಲಿ ರಸ್ತೆಗಳು ಕುಸಿಯುತ್ತಿವೆ. ನಿನ್ನೆಯಿಂದ ಕೊಂಚ ವಿರಾಮ ನೀಡಿದ್ದ ಮಳೆ ಮತ್ತೆ ಅಬ್ಬರಿಸಿದ್ದು, ಇನ್ನೂ ಎರಡು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಳೆಯಾಗಲಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಕೊಡಗು, ಮಂಡ್ಯ  ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಅಲ್ಲದೆ, ಹುಬ್ಬಳ್ಳಿ, ಗದಗ, ಧಾರವಾಡ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಬೀದರ್, ಬಳ್ಳಾರಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಿದೆ.

ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ನಗರದ ವಿವಿಧ ಭಾಗಗಳಲ್ಲಿ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಇನ್ನೂ ಎರಡು ದಿನ ಇದೇ ರೀತಿಯ ಮಳೆಯಾಗುವ ನಿರೀಕ್ಷೆ ಇದೆ.

ವಾಯುಭಾರ ಕುಸಿತ ಹಿನ್ನೆಲೆ ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಕೇರಳಗಳಲ್ಲೂ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಪ್ರವಾಹದ ಭೀತಿ ಉಂಟಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಇದನ್ನೂ ಓದಿ: ಅತ್ಯಾಚಾರ ಎಸಗಿದ ಆರೋಪಿಯು ಸಂತ್ರಸ್ತೆಯನ್ನೇ ಮದುವೆಯಾದರೂ ಪ್ರಕರಣ ರದ್ದಾಗುವುದಿಲ್ಲ: ಕರ್ನಾಟಕ ಹೈಕೋರ್ಟ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights