ಅದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ; 15ಕ್ಕೂ ಹೆಚ್ಚು ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ದಾಳಿ!
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಲ್ಲಿ ರಾಜ್ಯದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಸಂಬಂಧಿಸಿದ ನಿವಾಸ, ಕಚೇರಿ ಮತ್ತು ಅವರ ಆಪ್ತರ ಮನೆ ಸೇರಿದಂತೆ ಸುಮಾರು 60 ಸ್ಥಳಗಳ ಮೇಲೆ ಬುಧವಾರ ಎಸಿಬಿ ದಾಳಿ ನಡೆಸಿದೆ. ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
400 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಂಗಳೂರು, ಕಲಬುರಗಿ, ಗದಗ, ದಾವಣಗೆರೆ, ಬೆಳಗಾವಿಯ ಗೋಕಾಕ್, ಮಂಡ್ಯದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಂಗಳೂರು ಸ್ಮಾರ್ಟ್ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್ಎಲ್ಬಿಸಿ ಇಇ ಕೆ.ಶ್ರೀನಿವಾಸ್ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಹಣದಾಸೆಯಿಂದ ಸ್ನೇಹಿತನನ್ನೇ ಕಿಡ್ನಾಪ್ ಮಾಡಿದ ಸಹಪಾಠಿಗಳು; ಐವರ ಬಂಧನ
ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಲೋಕೋಪಯೋಗಿ ಇಲಾಖೆಯ ಜೆ.ಇ. ಶಾಂತಗೌಡ ಬಿರಾದಾರ್, ಗದಗದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ನಿವಾಸದ ಮೇಲೂ ದಾಳಿ ನಡೆದಿದೆ.
Bengaluru | Over a hundred Anti-Corruption Bureau (ACB) officials conducted search operations at 68 locations with respect to disproportionate of assets cases registered against 15 officers: Anti-Corruption Bureau (ACB) pic.twitter.com/Z2V3Pu3EQk
— ANI (@ANI) November 24, 2021
ಈ 15 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳ ಎದುರೇ ತಂದೆಯ ಭೀಕರ ಕೊಲೆ