ಹಾಸನ: ತಾಯಿಯ ಮೊಬೈಲ್‌ಗೆ ಮೆಸೇಜ್ ಕಳಿಸಿ ಬಾಲಕಿ ಆತ್ಮಹತ್ಯೆ
ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು, ತಾಯಿಯ ಮೊಬೈಲ್‌ಗೆ ಮೆಸೇಜ್ ಕಳಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನಾದ ಸತ್ಯಮಂಗಲ ಬಡಾವಣೆಯಲ್ಲಿ ತನ್ನ ತಂದೆ-ತಾಯಿ ಪ್ರಸಾದ್ ಮತ್ತು ಸುಬ್ಬಲಕ್ಷ್ಮಿ ಅವರೊಂದಿಗೆ ವಾಸಿಸುತ್ತಿದ್ದ ವಿದ್ಯಾರ್ಥಿನಿ ಪೂರ್ವಿಕಾ, ಖಾಸಗಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಆಕೆ ಶುಕ್ರವಾರ ಮುಂಜಾನೆ ಮನೆಯಿಂದ ಹೊರಬಂದು, ತಾಯಿಯ ಮೊಬೈಲ್‌ಗೆ ಮೆಸೇಜ್ ಕಳಿಸಿ, ಹಾಸನದ ಹೊರವಲಯದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ.
‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿ’ ಎಂದು ಪೂರ್ವಿಕಾ ತನ್ನ ತಾಯಿಗೆ ಮೆಸೇಜ್ ಕಳುಹಿಸಿದ್ದಾಳೆ. ಬಾಲಕಿ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಡಿಸೆಂಬರ್ ತಿಂಗಳಿನಲ್ಲಿ ಬ್ಯಾಂಕ್‌ಗಳಿಗೆ ಬರೋಬ್ಬರಿ 12 ರಜೆಗಳು: ಡೀಟೇಲ್ಸ್ ಹೀಗಿದೆ