ನದಿಗೆ ಹಾರಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ; ಜೊಡಿಗಳನ್ನು ರಕ್ಷಿಸಿದ ಅಂಬಿಗರು
ಕುಟುಂಬದವರ ವಿರೋಧದಿಂದ ಬೇಸತ್ತ ಇಬ್ಬರು ಯುವ ಪ್ರೇಮಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಮುಡಿಕಟ್ಟೆ ಬಳಿಯ ಕಪಿಲಾ ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ತೆಪ್ಪ ನಡೆಸುವ ಅಮನಬಿಗರು ರಕ್ಷಿಸಿದ್ದಾರೆ. ಇಬ್ಬರಿಗೂ ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಕಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪ್ರಾಪ್ತ ವಯಸ್ಸಿನವರಾದ ಅಭಿ (19) ಮತ್ತು 17 ವರ್ಷದ ವರ್ಷದ ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು. ಬಾಲಕಿಯು ಚಾಮರಾಜನಗರದ ಕಾಲೇಜಿನಲ್ಲಿ ಓದುತ್ತಿದ್ದರು ಮತ್ತು ಅಭಿ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ.
ಇವರಿಬ್ಬರ ಪ್ರೀತಿಯ ವಿಚಾರ ತಿಳಿದ ಬಾಲಕಿಯ ಕುಟುಂಬದವರು ವಿರೋಧಿಸಿದ್ದರು ಎನ್ನಲಾಗಿದೆ.
ಹೀಗಾಗಿ, ಈ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ರಜ್ಷಿಸಲಾಗಿದ್ದು, ನಂಜನಗೂಡು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.