ತಾಯಿ-ಮಗಳ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ; ಎಎಪಿ ಶಾಸಕಿಯ ಕೈವಾಡ?

38 ವರ್ಷದ ಮಹಿಳೆ ಹಾಗೂ ಆಕೆಯ ಪುತ್ರಿಯ ಮೇಲೆ ದುಷ್ಕರ್ಮಿಗಳ ಗುಂಪೊಂದು ಕಬ್ಬಿಣದ ರಾಡು ಹಾಗೂ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ಎಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಈ ಭಯಾನಕ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನಿಂದ ಇಳಿದು ಬರುವ ಮಗಳು ಹಾಗೂ ತಾಯಿಯನ್ನು ಅಡ್ಡಗಟ್ಟಿದ್ದ ಗುಂಪೊಂದು ಮಾರಕಾಸ್ತ್ರಗಳಿಂದ ಥಳಿಸುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ.

ದೆಹಲಿಯ ಶಾಲಿಮರ್ ಬಾಗ್ ರೆಸಿಡೆನ್ಶಿಯಲ್ ಕಾಲೋನಿಯಲ್ಲಿ ಕಳೆದ ತಿಂಗಳು 19 ರಂದು ಈ ಘಟನೆ ನಡೆದಿದ್ದು, ಇದಕ್ಕೆ ಕಾರಣರಾಗಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಎಪಿ ಶಾಸಕಿ ಬಂಧನ ಕುಮಾರಿ ಅವರ ಬೆಂಬಲಿಗರಿಂದ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ. ಶಾಸಕಿ ಬಂಧನ ಕುಮಾರಿ ಅವರ ಪತಿ ವಿರುದ್ಧ 2019ರಲ್ಲಿ ಎಫ್ ಐಆರ್ ದಾಖಲಿಸಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹಲ್ಲೆಗೊಳಗಾದ ಮಹಿಳೆ ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಶಾಸಕಿ ಬಂಧನ ಕುಮಾರಿ ನಿರಾಕರಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights