ಪೂರ್ವ ಭಾಗದಲ್ಲಿ ಜವಾದ್ ಚಂಡಮಾರುತದ ಅಬ್ಬರ; ರಾಜ್ಯದ 21 ಜಿಲ್ಲೆಗಳಲ್ಲಿ ಮತ್ತೆ ಮಳೆ!

ಒಡಿಶಾ ಹಾಗೂ ಆಂಧ್ರ ಪ್ರದೇಶದ ಕರಾವಳಿಗೆ ಭಾಗಕ್ಕೆ ಜವಾದ್ ಚಂಡಮಾರುತ ಅಪ್ಪಳಿಸಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ.ಹೀಗಾಗಿ ಈ ಎರಡೂ ರಾಜ್ಯಗಳಲ್ಲಿ ಕೆಟ್ಟೆಚ್ಚರ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದೆ. ಅಲ್ಲದೆ, ಕರ್ನಾಟಕದಲ್ಲೂ ಮಳೆಯಾಗಲಿದೆ ಎಂದು ಹೇಳಿದೆ.

ಶನಿವಾರ ಬೆಳಿಗ್ಗೆ ಒಡಿಶಾ ಹಾಗೂ ಆಂಧ್ರದ ಕರಾವಳಿಗೆ ಜವಾದ್ ಚಂಡಮಾರುತ ಅಪ್ಪಳಿಸಲಿದೆ. ಸೈಕ್ಲೋನ್ ಕಾರಣದಿಂದಾಗಿ ಭಾರೀ ಮಳೆಯಾಗಲಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಅಂಡಮಾನ್-ನಿಕೋಬಾರ್ ದ್ವೀಪ ಸಮೂಹದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಜವಾದ್ ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ 72 ಗಂಟೆ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳ ಬೇಕು ರಾಜ್ಯ ಸರ್ಕಾರಕ್ಕೂ ಐಎಂಡಿ ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ (Heavy Rain) ಹೆಚ್ಚಾಗಲಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights