ಬಿಎಸ್ವೈ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ; ಬಿಜೆಪಿ ಬೆಂಬಲಿಸುವ ಬಗ್ಗೆ ನಾಳೆ ಅಂತಿಮ ನಿರ್ಧಾರ ಪ್ರಕಟ: ಹೆಚ್ಡಿಕೆ
ಮಾಜಿ ಸಿಎಂ ಯಡಿಯೂಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿ ಆಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲ ನೀಡುವ ಬಗ್ಗೆ ನಾಳೆ (ಸೋಮವಾರ) ನಿರ್ಧಾರ ತಿಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಯಡಿಯೂರಪ್ಪ ಅವರು ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಕೋರಿದ್ದಾರೆ. ಈವರೆಗೆ ಯಡಿಯೂರಪ್ಪ ಮಾತ್ರ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ. ಉಳಿದಂತೆ ಬೇರೆ ಯಾವ ನಾಯಕರು ಬೆಂಬಲ ಕೇಳಿಲ್ಲ. ಅವರಿಗೆ ಬೆಂಬಲ ನೀಡುವ ಬಗ್ಗೆ ನಾಳೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರು ನಮಗೆ ಯಾರ ಬೆಂಬಲವೂ ಬೇಡ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ ಎಂದೂ ಹೆಚ್ಡಿಕೆ ಹೇಳಿದ್ದಾರೆ.
ನಾಳೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಸಭೆ ನಡೆಯಲಿದೆ. ಸಭೆಯಲ್ಲಿ ಈ ಎಲ್ಲಾ ಅಂಶಗಳನ್ನು ಮುಂದಿಟ್ಟುಕೊಂಡು ಚರ್ಚೆ ನಡೆಸುತ್ತೇವೆ. ಯಡಿಯೂರಪ್ಪ ನನಗೆ ಕರೆ ಮಾಡಿ ಬೆಂಬಲ ಕೇಳಿರೋ ಬಗ್ಗೆಯೂ ಚರ್ಚೆಯಾಗುತ್ತದೆ. ಆ ಬಳಿಕ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವ ವಿಚಾರಕ್ಕೆ ಕುರಿತಂತೆ ಸುದ್ದಿಗೋಷ್ಟಿ ನಡೆಸಿ ನಿರ್ಧಾರ ಪ್ರಕಟಿಸುತ್ತೇವೆ ಎಂದು ಹೆಚ್ಡಿಕೆ ಹೇಳಿದ್ದಾರೆ.
ಇದನ್ನೂ ಓದಿ: ನದಿಗೆ ಹಾರಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ; ಜೊಡಿಗಳನ್ನು ರಕ್ಷಿಸಿದ ಅಂಬಿಗರು