ಕಿಚ್ಚ ಸುದೀಪ್ ಅವರ ‘ವಿಕ್ರಾಂತ್ ರೋಣ’ ರಿಲೀಸ್ಗೆ ಡೇಟ್ ಫಿಕ್ಸ್; ‘3D’ಯಲ್ಲಿ ಸಿನಿಮಾ ಪ್ರದರ್ಶನ!
ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ಗೆ ಡೇಟ್ ಫಿಕ್ಸ್ ಆಗಿದೆ. 2022ರ ಫೆಬ್ರವರಿ 24 ರಂದು ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಘೋಷಿಸಿದೆ. ‘3ಡಿ’ಯಲ್ಲಿ ಪ್ರದರ್ಶನಗೊಳ್ಳಲಿರುವ ಈ ಸಿನಿಮಾದ ಡೇಟ್ ಅನೌನ್ಸ್ ಆಗುತ್ತಿದ್ದಂತೆಯೇ ಸುದೀಪ್ ಅಭಿಮಾನಿಗಳು ಸಡಗರ ವ್ಯಕ್ತಪಡಿಸಿದ್ದಾರೆ.
ಸಿನಿಮಾದಲ್ಲಿ ಟಿಫರೆಂಟ್ ಲುಕ್ನಲ್ಲಿ ಕಾಣಿಸಿಕೊಂಡಿರುವ ಸುದೀಪ್ ಅವರಿಗೆ ಇದೇ ಮೊದಲ ಬಾರಿಗೆ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ.
ವಿಕ್ರಾಂತ್ ರೋಣ ಸಿನಿಮಾ ರೆಟ್ರೋ ಕಾಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗಿದೆ. ಸಿನಿಮಾದ ಬಹುತೇಕ ಕಥೆ ಕಾಡಿನಲ್ಲೇ ಸಾಗುತ್ತದೆ ಎಂದು ಹೇಳಲಾಗಿದ್ದು, ಅದಕ್ಕಾಗಿ ಅದ್ದೂರಿ ಕಾಡಿನ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ. ಹೈದರಾಬಾದ್, ಬೆಂಗಳೂರು, ಕೇರಳ ಭಾಗದಲ್ಲಿ ಶೂಟಿಂಗ್ ಮಾಡಲಾಗಿದೆ.
‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಒಂದು ಬ್ಯೂಟಿಫುಲ್ ಪ್ರಪಂಚವನ್ನು ಸೃಷ್ಟಿಸಿ, ಕಥೆ ಹೇಳಿದ್ದೇವೆ. ಅದು ಯಶಸ್ಸು ಗಳಿಸುತ್ತದೆ ಎಂದು ನಿರೀಕ್ಷಿಸಿದ್ದೇವೆ. ಈ ಸಿನಿಮಾ ಸಕ್ಸಸ್ ಆದರೆ, ನಮಗೆ ಹೊಸ ಹೊಸ ಕಥೆಗಳನ್ನು ಹೇಳುವುದಕ್ಕೆ ಧೈರ್ಯ ಬರುತ್ತದೆ’ ಎಂದು ಸುದೀಪ್ ಹೇಳಿದ್ದಾರೆ.
#VikrantRonaOnFeb24 pic.twitter.com/J6gG4YXlvU
— Kichcha Sudeepa (@KicchaSudeep) December 7, 2021
ಫ್ಯಾಂಟಸಿ, ಆಕ್ಷನ್, ಅಡ್ವೆಂಚರ್, ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ‘ವಿಕ್ರಾಂತ್ ರೋಣ’ ಸಿನಿಮಾ ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಮಲಯಾಳಂ ಬಿಟ್ಟು ಮಿಕ್ಕೆಲ್ಲ ಭಾಷೆಗಳಲ್ಲಿಯೂ ಸುದೀಪ್ ಅವರೇ ತಮ್ಮ ಪಾತ್ರಕ್ಕೆ ಡಬ್ಬಿಂಗ್ (ಧ್ವನಿ) ಮಾಡಿದ್ದಾರೆ.
ಸಿನಿಮಾದಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನೀತಾ ಅವರು ಇದೇ ಮೊದಲ ಬಾರಿಗೆ ಬಿಗ್ ಸ್ಕ್ರೀನ್ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರು ಸಿನಿ ಪ್ರೇಮಿಗಳ ಮನ ಗೆಲ್ಲುತ್ತಾರೆಯೇ ಎಂಬುದೂ ಕೂಡ ಚಿತ್ರತಂಡದ ಕುತೂಹಲವನ್ನು ಕೆರಳಿಸಿದೆ.
ಇನ್ನು, ರವಿಶಂಕರ್ ಗೌಡ, ಮಧುಸೂದನ್ ರಾವ್ ಮುಂತಾದವರ ಅಭಿನಯಿಸಿದ್ದಾರೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರೂ ಕೂಡ ಒಂದು ಹಾಡಿನಲ್ಲಿ ಸುದೀಪ್ ಜೊತೆಗೆ ಹೆಜ್ಜೆ ಹಾಕಿದ್ದಾರೆ ಹಾಗೂ ಕೆಲ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಜಾಕ್ ಮಂಜು ಅವರು ಸಿನಿಮಾಗೆ ನಿರ್ಮಾಪಕರಾಗಿದ್ದು, ಅಲಂಕಾರ್ ಪಾಂಡಿಯನ್ ಸಹ ನಿರ್ಮಾಪಕರಾಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ: ಮುಂಬೈ ಏರ್ಪೋರ್ಟ್ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಬಂಧನ; ಕಾರಣವೇನು?