ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿಗೆ ಡಿಕ್ಕಿ ಹೊಡೆದ ಶಾಲಾ ಬಸ್; 20 ಮಕ್ಕಳಿಗೆ ಗಾಯ
ಚಾಲಕನ ನಿಯಂತ್ರಣ ಕಳೆದುಕೊಂಡ ಶಾಲಾ ಬಸ್‌ವೊಂದು ಕರೆ ಏರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವ ಘಟನೆ ದಾವಣಗೆರೆ ಇಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಹಾಲೇಹಳ್ಳಿ ಕ್ರಾಸ್ ಬಳಿ ಶಾಲೆಯಿಂದ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಶಾಲಾ ವಾಹನವು ಚಾಲಕ ನಿಯಂತ್ರಣ ತಪ್ಪಿದಿದ್ದರಿಂದಾಗಿ, ಕೆರೆ ಏರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, 20ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.
ಗಾಯಾಳು ಮಕ್ಕಳಿಗೆ ಜಗಳೂರಿನ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.