ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ
ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಸೇರಿದಂತೆ ಹಿರಿಯ ರಕ್ಷಣಾ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರ್ನಲ್ಲಿ ಪತನಗೊಂಡಿದೆ. ಇದೂವರೆಗೂ ಸುಟ್ಟಗಾಯಗಾಳಿರುವ ಐದು ಮೃತದೇಹಗಳು ಪತ್ತೆಯಾಗಿವೆ ಮತ್ತು ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇತರ ಅಧಿಕಾರಿಗಳು ಸೇರಿ ಒಟ್ಟು 14 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ತಮಿಳುನಾಡಿನ ಕೊನೂರ್ ಬಳಿ ಬುಧವಾರ ಪತನಗೊಂಡಿದೆ ಎಂದು ಐಎಎಫ್ ಖಚಿತಪಡಿಸಿದೆ.
ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಐಎಎಫ್ ಟ್ವಿಟರ್ನಲ್ಲಿ ತಿಳಿಸಿದೆ. IAFನ ಹೊಸ Mi-17 V5 ಹೆಲಿಕಾಪ್ಟರ್ ಸೂಲೂರು ವಾಯುನೆಲೆಯಿಂದ ವೆಲ್ಲಿಂಗ್ಟನ್ನಲ್ಲಿರುವ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
Latest visuals from the spot (between Coimbatore and Sulur) where a military chopper crashed in Tamil Nadu. CDS Bipin Rawat, his staff and some family members were in the chopper.
(Pics Source: Locals involved in search and rescue operation) pic.twitter.com/miALr88sm1
— ANI (@ANI) December 8, 2021
ಸದ್ಯಕ್ಕೆ ತೀವ್ರ ಸುಟ್ಟ ಗಾಯಗಳಾಗಿರುವ 5 ದೇಹಗಳು ಪತ್ತೆಯಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಪೂರ್ಣ ಮೂರು ವರ್ಷಗಳ ಅವಧಿಗೆ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ನಂತರ ರಾವತ್ ಅವರು ಡಿಸೆಂಬರ್ 31, 2019 ರಂದು ಭಾರತದ ಮೊದಲ ಸಿಡಿಎಸ್ ಆಗಿ ಅಧಿಕಾರ ವಹಿಸಿಕೊಂಡರು. ಫೆಬ್ರವರಿ 3, 2015 ರಂದು ನಾಗಾಲ್ಯಾಂಡ್ನ ದಿಮಾಪುರ್ನಲ್ಲಿ ಚೀತಾ ಅಪಘಾತದಲ್ಲಿ ರಾವತ್ ಅಪಾಯದಿಂದ ಪಾರಾಗಿದ್ದರು. ಆ ಸಮಯದಲ್ಲಿ ಅವರು ಲೆಫ್ಟಿನೆಂಟ್ ಜನರಲ್ ಆಗಿದ್ದರು.
ಇದನ್ನೂ ಓದಿ: ವಾರಣಾಸಿಗೆ ಮೋದಿ ಭೇಟಿ; ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು!

