ಸೇನಾ ಹೆಲಿಕಾಪ್ಟರ್‌ ದುರಂತ: 14 ಜನರ ಪೈಕಿ ಬದುಕುಳಿದ ಕ್ಯಾಪ್ಟನ್ ವರುಣ್‌; ಚೇತರಿಗೆ ಪಾರ್ಥನೆ

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್‌ ಬುಧವಾರ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದ ರಾವತ್‌ ಮತ್ತು ಅವರ ಪತ್ನಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದು, ಒಬ್ಬರು ಮಾತ್ರ ಬದುಕುಳಿದಿದ್ದಾರೆ.

ಬದುಕುಳಿತದ ಸೇನಾ ಅಧಿಕಾರಿಯನ್ನು ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ. ವೆಲ್ಲಿಂಗ್ಟನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇವರು 2020ರ ಅಕ್ಟೋಬರ್‌ 12ರಂದು  10 ಸಾವಿರ ಅಡಿಗಳಷ್ಟು ಎತ್ತರದಲ್ಲಿ ಪರೀಕ್ಷಾರ್ಥ ಹಾರಾಟ ನಡಸುತ್ತಿದ್ದ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವು ಅಪಾಯಕ್ಕೆ ಸಿಲುಕಿದ್ದಾಗ, ಆ ವಿಮಾನವನ್ನು ಬಹಳ ಚಾಣಾಕ್ಷತೆಯಿಂದ ಉಳಿಸಿದ್ದರು. ಅವರ ಸಾಹಸಕ್ಕಾಗಿ ಸ್ವಾತಂತ್ರ್ಯ ದಿನಾಚರಣೆಯಂದು ಅವರಿಗೆ ಶೌರ್ಯ ಚಕ್ರ ಪ್ರಶಸ್ತಿ ನೀಡಲಾಗಿತ್ತು.

ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು 14 ಮಂದಿಯ ಪೈಕಿ ಬದುಕುಳಿದಿರುವ ಕ್ಯಾಪ್ಟನ್‌ ವರುಣ್‌ ಸಿಂಗ್‌ ಬಹುಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌ ಹೇಳಿದ್ದಾರೆ.

ಜನರಲ್ ಬಿಪಿನ್ ರಾವತ್ ಅವರ ಮೃತ ಶರೀರವನ್ನು ಇಂದು ದೆಹಲಿಗೆ ಸ್ಥಳಾಂತರಿಸಲಾಗುತ್ತಿದ್ದು, ನಾಳೆ ಅವರ ಅಂತಿಮ ಕ್ರಿಯೆ ನಡೆಸಲಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ರಾಜಸ್ಥಾನ: 4 ವಿದ್ಯಾರ್ಥಿನಿಯರ ಮೇಲೆ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ: ಶಾಲೆಯ 15 ಸಿಬ್ಬಂದಿ ವಿರುದ್ಧ ಎಫ್‌ಐಆರ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights